ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್ ಪಡೆದ ಸ್ಪಿನ್​ ಮಾಂತ್ರಿಕ ಆರ್​.ಅಶ್ವಿನ್!

R Ashwin
Published on

ರಾಜ್‌ಕೋಟ್‌: ಪ್ರವಾಸಿ ಇಂಗ್ಲೆಂಡ್‌ ಎದುರು ಇಲ್ಲಿ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್​ ಇಂಡಿಯಾದ ಸ್ಪಿನ್ನರ್​ ಆರ್​. ಅಶ್ವಿನ್ ಜಾಕ್​ ಕ್ರಾಲಿ ವಿಕೆಟ್​ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 500 ವಿಕೆಟ್​ ಪಡೆದ ದಾಖಲೆ ಬರೆದರು.

ಈ ಸಾಧನೆ ಮಾಡಿದ 2ನೇ ಭಾರತೀಯ ಹಾಗೂ ವಿಶ್ವದ 9ನೇ ಬೌಲರ್​ ಎಂಬ ಖ್ಯಾತಿಗೆ ಪಾತ್ರರಾದರು. ಅನಿಲ್​ ಕುಂಬ್ಳೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್​. ಅನಿಲ್ ಕುಂಬ್ಳೆ ಟೆಸ್ಟ್​ನಲ್ಲಿ 619 ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಇದುವರೆಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ 98 ಟೆಸ್ಟ್ ಪಂದ್ಯಗಳನ್ನು ಆಡಿ 500* ವಿಕೆಟ್​ಗಳನ್ನು ಉರುಳಿಸಿದ್ದಾರೆ. 34 ಬಾರಿ ಇನಿಂಗ್ಸ್​ ಒಂದರಲ್ಲಿ 5 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. 8 ಬಾರಿ 10 ವಿಕೆಟ್​ ಗೊಂಚಲು ಪಡೆದಿದ್ದಾರೆ.

ಪ್ರಸಕ್ತ ಕ್ರಿಕೆಟ್​ ಆಡುತ್ತಿರುವ ಬೌಲರ್​ಗಳ ಪೈಕಿ ಅತಿ ಹೆಚ್ಚು ಟೆಸ್ಟ್ ವಿಕೆಟ್​ ಕಿತ್ತ ಸಾಧಕರ ಪಟ್ಟಿಯಲ್ಲಿ ಅಶ್ವಿನ್​ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್​ನ ಜೇಮ್ಸ್​ ಆ್ಯಂಡರ್ಸನ್​(696*) ಮತ್ತು ಆಸ್ಟ್ರೇಲಿಯಾದ ನಥಾನ್​ ಲಿಯೋನ್​(512*) ಕ್ರಮವಾಗಿ ಮೊದಲೆರಡು ಸ್ಥಾನ ಪಡೆದಿದ್ದಾರೆ.

ಬ್ಯಾಟಿಂಗ್​ನಲ್ಲಿ ಅಶ್ವಿನ್​ ಹಲವು ಸಾಧನೆಗಳನ್ನು ಮಾಡಿದ್ದಾರೆ. 139 ಟೆಸ್ಟ್​ ಇನಿಂಗ್ಸ್​ನಿಂದ 3308* ರನ್ ಗಳಿಸಿದ್ದಾರೆ. 5 ಶತಕ ಕೂಡ ಬಾರಿಸಿದ್ದಾರೆ. ಇದರಲ್ಲಿ 124 ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 14 ಅರ್ಧಶತಕ ಒಳಗೊಂಡಿದೆ. 116 ಏಕದಿನ ಪಂದ್ಯಗಳನ್ನಾಡಿ 707 ರನ್​, 65 ಟಿ20ಯಿಂದ 85 ರನ್​ ಗಳಿಸಿದ್ದಾರೆ. ಒಟ್ಟಾರೆಯಾಗಿ ಮೂರು ಮಾದರಿಯ ಅಂತಾರಾಷ್ಟ್ರಿಯ ಕ್ರಿಕೆಟ್​ನಲ್ಲಿ 4,199* ರನ್​ ಕಲೆಹಾಕಿದ್ದಾರೆ.

140  ಸ್ಟುವರ್ಟ್ ಬ್ರಾಡ್ (ಇಂಗ್ಲೆಂಡ್)

129  ಜೇಮ್ಸ್ ಆಂಡರ್ಸನ್ (ಇಂಗ್ಲೆಂಡ್)

129 ಕರ್ಟ್ನಿ ವಾಲ್ಷ್ (ವೆಸ್ಟ್ ಇಂಡೀಸ್)

110  ಗ್ಲೆನ್ ಮೆಕ್‌ಗ್ರಾತ್ (ಆಸ್ಟ್ರೇಲಿಯಾ)

108 ಶೇನ್ ವಾರ್ನ್ (ಆಸ್ಟ್ರೇಲಿಯಾ)

105 ಅನಿಲ್ ಕುಂಬ್ಳೆ (ಭಾರತ)

98 ರವಿಚಂದ್ರನ್ ಅಶ್ವಿನ್ (ಭಾರತ)

87 ಮುತ್ತಯ್ಯ ಮುರಳೀಧರನ್ (ಶ್ರೀಲಂಕಾ)

ಅತಿ ಕಡಿಮೆ ಟೆಸ್ಟ್ ಪಂದ್ಯಗಳನ್ನಾಡಿ 500 ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳು

ಎರಡನೇ ಅತಿ ಕಡಿಮೆ ಎಸೆತದಲ್ಲಿ 500 ವಿಕೆಟ್ ಸಾಧನೆ: ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ಕೇವಲ 25,714 ಎಸೆತಗಳನ್ನು ಎಸೆದು 500 ವಿಕೆಟ್ ಕಬಳಿಸುವ ಮೂಲಕ ಎರಡನೇ ಅತಿ ಕಡಿಮೆ ಎಸೆತದಲ್ಲಿ 500 ವಿಕೆಟ್ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ದಿಗ್ಗಜ ಬೌಲರ್ ಗ್ಲೆನ್ ಮೆಗ್ರಾಥ್ 25,528 ಎಸೆತಗಳನ್ನು ಎಸೆದು 500 ವಿಕೆಟ್ ಕಬಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net