INDvsAUS | ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ; ಹೊಸ ದಾಖಲೆ ಬರೆದ ಅಶ್ವಿನ್-ಜಡೇಜಾ

INDvsAUS
Published on

ನವದೆಹಲಿ: ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್​ನಲ್ಲಿ ಉಸ್ಮಾನ್ ಖವಾಜ ಅವರ ವಿಕೆಟ್ ತೆಗೆಯುವ ಮೂಲಕ ಆಲ್​ರೌಂಡರ್ ರವೀಂದ್ರ ಜಡೇಜಾ ಟೆಸ್ಟ್​ ಕ್ರಿಕೆಟ್​ನಲ್ಲಿ 250 ವಿಕೆಟ್ ಪಡದ ಸಾಧನೆ ಮಾಡಿದ್ದಾರೆ.

ಕಪಿಲ್ ದೇವ್, ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಮತ್ತು ಆರ್​.ಅಶ್ವಿನ್ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಅಪರೂಪದ ಸಾಧನೆ ಮಾಡಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.

ನಾಗ್ಪರದಲ್ಲಿ ನಡೆಯುತ್ತಿರುವ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ ತಂಡ 263 ರನ್​ಗಳಿಗೆ ಆಲ್​ಔಟ್ ಆಗಿದೆ. ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 4 ವಿಕೆಟ್, ಸ್ಪಿನ್ನರ್​ಗಳಾದ ಆರ್​.ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದುಕೊಂಡಿದ್ದಾರೆ.

ಜಡೇಜಾ ಜತೆಗೆ ಆರ್​.ಅಶ್ವಿನ್ ಕೂಡ ಹೊಸದೊಂದು ದಾಖಲೆ ಬರೆದಿದ್ದು, ಆಸ್ಟ್ರೇಲಿಯ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 100 ವಿಕೆಟ್ ಕೂಡ ಕಬಳಿಸಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net