ಮಾದಪ್ಪನ ಮೊರೆ ಹೋದ ಆರ್​ಸಿಬಿ ಫ್ಯಾನ್!

RCB
Published on

ಚಾಮರಾಜನಗರ: ಐಪಿಎಲ್ 13ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯಾದರೂ ಆರ್​ಸಿಬಿ ತಂಡ ಕಪ್ ಗೆಲ್ಲಲೇಬೇಕೆಂದು ಆಶಿಸಿ ಅಭಿಮಾನಿಯೊಬ್ಬ ಮಾದಪ್ಪನ ಮೊರೆ ಹೋಗಿದ್ದಾನೆ.

ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಅಂಗವಾಗಿ ನಡೆದ ಮಹಾರಥೋತ್ಸ ವದ ವೇಳೆ ಆರ್​ಸಿಬಿ ತಂಡದ ಕಟ್ಟಾ ಅಭಿಮಾನಿಯಾಗಿರುವ ಹನೂರಿನ ರಘು ಎಂಬಾತ ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ’ ಎಂದು ಬರೆದು ಮಾದಪ್ಪನ ರಥಕ್ಕೆ ಎಸೆದು ಪ್ರಾರ್ಥನೆ ಸಲ್ಲಿಸಿದ್ದಾನೆ.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ಸವದ ವೇಳೆ ಇಷ್ಟಾರ್ಥ ಸಿದ್ಧಿಗಾಗಿ ರಥೋತ್ಸವಕ್ಕೆ ಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸುವುದು ಇಲ್ಲಿನ ವಾಡಿಕೆ. ಆರ್​ಸಿಬಿ ಅಭಿಮಾನಿ ರಘು ಮಾದಪ್ಪನಿಗೆ ತನ್ನ ನೆಚ್ಚಿನ ತಂಡ ಗೆಲ್ಲಬೇಕೆಂದು ಸಲ್ಲಿಸಿರುವ ಕೋರಿಕೆ ಈಡೇರುವುದೇ ಎಂಬುದನ್ನು ಕಾದು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net