

IPL 2025; ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಇಂದು(ಏ.10) ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಜಯ ಸಾಧಿಸಿತು.
164 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲಿ ಎಡವಿತು ಆದರೆ, ರಾಹುಲ್ ಅವರ 53 ಎಸೆತಗಳಲ್ಲಿ ಆರು ಸಿಕ್ಸರ್ ಮತ್ತು ಏಳು ಬೌಂಡರಿಗಳ ಸಹಿತ ಉತ್ತಮ ಬ್ಯಾಟಿಂಗ್(93 ರನ್) ಅವರ ತಂಡಕ್ಕೆ ನೆರವಾಯಿತು.