

ಕೋಲ್ಕತಾ: ಈಡನ್ ಗಾರ್ಡ್ನ್ಸ್ನಲ್ಲಿ ನಡೆದ ಐಪಿಎಲ್ 2024 ರ 36 ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 1 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಸೋಲಿನ ಕೂಪದಿಂದ ಎದ್ದುಬರಲು ಮತ್ತೊಮ್ಮೆ ವಿಫಲವಾಗಿದೆ. ಪ್ಲೇಆಫ್ ಹಂತ ತಲುಪುವ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ. ಆಡಿದ 8 ಪಂದ್ಯಗಳಲ್ಲಿ 7 ಸೋಲು ಮತ್ತು 1 ಗೆಲುವು ಸಾಧಿಸಿದ್ದು, ಕೇವಲ 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲೇ ಮುಂದುವರೆದಿದೆ.
ಆರ್ಸಿಬಿ ತಂಡದ ವಿಲ್ ಜಾಕ್ಸ್ ಹಾಗೂ ರಜತ್ ಪಾಟಿದಾರ್ ಅರ್ಧಶತಕದ ಕೊಡುಗೆ, ಸ್ಪಿನ್ ಬೌಲರ್ ಕರಣ್ ಶರ್ಮಾ ಮಿಂಚಿನ ಬ್ಯಾಟಿಂಗ್ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೇವಲ ಒಂದು ರನ್ ಅಂತರದಿಂದ ವಿರೋಚಿತ ಸೋಲು ಅನುಭವಿಸಿದೆ.
ಭಾನುವಾರ ನಡೆದ 36ನೇ ಐಪಿಎಲ್2024 ಪಂದ್ಯದಲ್ಲಿ ಗೆಲ್ಲಲು 223 ರನ್ ಗುರಿ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ಗಳಲ್ಲಿ 221 ರನ್ ಗಳಿಸಿ ಆಲೌಟಾಗಿದೆ.