

RCB : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಚರ್ಸ್ ಬೆಂಗಳೂರು ತಂಡ 11 ರನ್ಗಳ ರೋಚಕ ಗೆಲುವು ಸಾಧಿಸಿದೆ.
ಇದನ್ನೂ ಓದಿ:ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಪೇರಿಸಿತು. ವಿರಾಟ್ ಕೊಹ್ಲಿ 42 ಎಸೆತಗಳಿಗೆ 70 ರನ್, ದೇವದತ್ ಪಡಿಕಲ್ 27 ಬಾಲ್ಗೆ 50 ರನ್ ಹಾಗೂ ಫಿಲ್ಸಾಲ್ಟ್ 23 ಬಾಲ್ 26 ರನ್ ಹೊಡೆದರು.
206 ರನ್ ಗುರಿ ಬೆನ್ನಟ್ಟಿದ ರಾಜಸ್ತಾನ್ ರಾಯಲ್ಸ್ ತಂಡ 9 ವಿಕೆಟ್ ನಷ್ಟಕ್ಕೆ 194 ರನ್ಗಳನಷ್ಟೇ ಹೊಡೆಯಲು ಸಾಧ್ಯವಾಯಿತು. ಈ ಮೂಲಕ ತವರಿನಲ್ಲೇ ಸತತ ಮೂರು ಸೋಲುಗಳಿಂದ ಕಂಗೆಟ್ಟಿದ್ದ ಆರ್ಸಿಬಿಗೆ ಚಿನ್ನಸ್ವಾಮಿಯಲ್ಲಿ 11 ರನ್ಗಳ ಭರ್ಜರಿ ಜಯ ಸಾಧಿಸಿದೆ.