

ಹೈದರಾಬಾದ್: 17ನೇ ಆವೃತ್ತಿಯ ಐಪಿಎಲ್ನಲ್ಲಿ ಸತತ ಸೋಲುಗಳಿಂದ ಅನಧಿಕೃತವಾಗಿ ಪ್ಲೇಆಫ್ ರೇಸ್ನಿಂದ ಹೊರಬಿದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ವಿರೋಚಿತ ಸೋಲು ಕಂಡಿದ್ದ ಆರ್ಸಿಬಿ ಎಸ್ಆರ್ಎಚ್ ವಿರುದ್ಧದ ಪಂದ್ಯದಲ್ಲಿ ಪುಟಿದೇಳಲು ತಯಾರಿ ನಡೆಸುತ್ತಿದೆ.
ಏಪ್ರಿಲ್ 25ರಂದು ಹೈದರಾಬಾದಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ 41ನೇ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗಿದ್ದು, ಪ್ರಮುಖರಿಗೆ ಕೊಕ್ ನೀಡುವ ಸಾಧ್ಯತೆ ಹೆಚ್ಚಿದೆ.
ಬೆರಳಿನ ಗಾಯಕ್ಕೆ ತುತ್ತಾಗಿದ್ದ ಮ್ಯಾಕ್ಸ್ವೆಲ್ ಎಸ್ಆರ್ಎಚ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದು, ಕಳೆದ ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಕ್ಯಾಮರೂನ್ ಗ್ರೀನ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ರೀನ್ ಬದಲಾಗಿ ಮ್ಯಾಕ್ಸ್ವೆಲ್ ಕಣಕ್ಕಿಳಿಯುವುದು ಕನ್ಫರ್ಮ್ ಎಂದು ಹೇಳಲಾಗಿದೆ.
ಬೌಲಿಂಗ್ ವಿಭಾಗಕ್ಕೆ ಬರುವುದಾದರೆ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗ್ಯೂಸನ್ ದುಬಾರಿಯಾಗುತ್ತಿದ್ದು, ಇವರ ಬದಲಿಗೆ ಇಂಗ್ಲೆಂಡ್ ವೇಗಿ ಟಾಮ್ ಕರ್ರನ್ ಆರ್ಸಿಬಿ ಪರ ಪದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಉಳಿದಂತೆ ಆರ್ಸಿಬಿಯಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷಿಸವಂತಿಲ್ಲ. ಹಾಲಿ ಟೂರ್ನಿಯಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ ಪ್ಲೇ ಆಫ್ ಹಾದಿಯನ್ನು ಬಹುತೇಕ ಸುಗಮವಾಗಿರಿಸಿಕೊಂಡಿರುವ ಎಸ್ಆರ್ಎಚ್ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿದು ಬಂದಿದೆ.