RCB ಗೆಲುವು ಅತೀವ ಸಂತೋಷ ತಂದಿದೆ: CM ಸಿದ್ದರಾಮಯ್ಯ

dk - 2025-06-04T131947.174
Published on

ಬೆಂಗಳೂರು: IPL ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ರಾಯಲ್​​ ಚಾಲೆಂಜರ್ಸ್ ಬೆಂಗಳೂರು(RCB)​ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಬುಧವಾರ ಮಾತನಾಡಿದ ಅವರು, ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್​​ಸಿಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ವಿಧಾನಸೌಧದ ಮುಂಭಾಗದಲ್ಲಿ RCBಗೆ ಸನ್ಮಾನ

ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಆರ್‌ಸಿಬಿ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಲಿದ್ದಾರೆ. ಅದಕ್ಕಾಗಿ ವಿಧಾನಸೌಧದ ಮೆಟ್ಟಿಲುಗಳಲ್ಲಿ ಸಿದ್ದತೆ ಭರದಿಂದ ಸಾಗಿದೆ. ಬಳಿಕ ಆರ್‌ಸಿಬಿ ತಂಡ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ಆರಂಭಿಸಲಿದೆ. ವಿಧಾನಸೌಧದಿಂದ ಆರಂಭವಾಗಲಿರುವ ವಿಕ್ಟರಿ ಪರೇಡ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಿದೆ. ಸಂಜೆ 6 ಗಂಟೆಯಿಂದ ಚಿನ್ನಾಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಇಂದು ಇಡೀ ಬೆಂಗಳೂರು ಕೆಂಪು ಬಣ್ಣದಿಂದ ಕಂಗೊಳಿಸಲಿದ್ದು, ನಗರದಲ್ಲಿ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಕ್ಟರಿ ಪರೇಡ್ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾಕಷ್ಟು ಅಭಿಮಾನಿಗಳು ಬೆಂಗಳೂರಿನತ್ತ ಆಗಮಿಸುತ್ತಿದ್ದು, ಸಂಜೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಭಾರಿ ಸಂಚಾರ ದಟ್ಟಣೆ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net