ಆರ್​ಸಿಬಿ VS ಸಿಎಸ್​ಕೆ ಹೈವೋಲ್ಟೇಜ್ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಭದ್ರತೆ

police
Published on

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಟೂರ್ನಿಯಲ್ಲಿ ಇಂದು (ಶನಿವಾರ ಮೇ 17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್​ಕಿಂಗ್ಸ್​ ಸೆಣಸಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ಮೈದಾನದ ಸುತ್ತಮುತ್ತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ.

ಆರ್​ಸಿಬಿ ಮತ್ತ ಸಿಎಸ್​ಕೆ ಎರಡೂ ತಂಡಗಳಿಗೆ ಇಂದಿನ ಐಪಿಎಲ್ ಪಂದ್ಯ ಡು ಆರ್ ಡೈ ಮ್ಯಾಚ್ ಆಗಿದೆ. ಈ ವೇಳೆ ಅಹಿತಕರ ಘಟನೆಹಳು ನಡೆಯದಂತೆ ನೋಡಿಕೊಳ್ಳಲು ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಭದ್ರತೆಗಾಗಿ ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಪಿ 4 ತುಕಡಿಗಳು, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಕ್ರೀಡಾಂಗಣ ಒಳಗೆ ಮತ್ತು ಹೊರಗೆ ಸೇರಿ ಹಲವು ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ.

ಕ್ಯೂಆರ್‌ಟಿ, ವಾಟರ್ ಜೆಟ್, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವನ್ನೂ ನಿಯೋಜಿಸಲಾಗಿದೆ. ಇದೇ ವೇಳೆ ಮಫ್ತಿಯಲ್ಲೂ ಮೈದಾನದ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ನಕಲಿ ಟಿಕೆಟ್ ಹಾವಳಿ ತಡೆಗಟ್ಟಲು ಮಫ್ತಿಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net