ಆರ್‌ಸಿಬಿಗೆ ಹ್ಯಾಟ್ರಿಕ್ ಜಯ: ಚೆಪಾಕ್‌ನಲ್ಲಿ ವಿರಾಟ್ ಕೊಹ್ಲಿ ಪಡೆ ಅಜೇಯ

rcbbbbbb
Published on

ಚೆನ್ನೈ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಅಬ್ಬರಿಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಐಪಿಎಲ್-14ರಲ್ಲಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿತು.

ಚೆಪಾಕ್ ಅಂಗಳದ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರದ ಲೀಗ್‌ನ ಮೊದಲ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಪಡೆ 38 ರನ್‌ಗಳಿಂದ ಎರಡು ಬಾರಿಯ ಚಾಂಪಿಯನ್ ಕೋಲ್ಕತ ನೈಟ್ ರೈಡರ್ಸ್‌ ತಂಡವನ್ನು ಸೋಲಿಸಿತು. ಸ್ಫೋಟಕ ಬ್ಯಾಟ್ಸ್‌ಮನ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್ (78ರನ್, 49 ಎಸೆತ, 9 ಬೌಂಡರಿ, 3 ಸಿಕ್ಸರ್) ಹಾಗೂ ಎಬಿ ಡಿವಿಲಿಯರ್ಸ್‌ (76*ರನ್, 34 ಎಸೆತ, 9 ಬೌಂಡರಿ, 3 ಸಿಕ್ಸರ್) ಜೋಡಿ ಅದ್ಭುತ ಬ್ಯಾಟಿಂಗ್‌ನಿಂದ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು. ಸತತ 3ನೇ ಗೆಲುವಿನೊಂದಿಗೆ ವಿರಾಟ್ ಕೊಹ್ಲಿ ಬಳಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರ್‌ಸಿಬಿ, ಆರಂಭಿಕ ವೈಲ್ಯದ ನಡುವೆಯೂ ಎಬಿಡಿ-ಮ್ಯಾಕ್ಸ್‌ವೆಲ್ ಅಬ್ಬರದ ನೆರವಿನಿಂದ 4 ವಿಕೆಟ್‌ಗೆ 204 ರನ್ ಪೇರಿಸಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಕೆಕೆಆರ್ 8 ವಿಕೆಟ್‌ಗೆ 166 ರನ್ ಪೇರಿಸಲಷ್ಟೇ ಶಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net