

ಕಾರ್ಯಕ್ರಮಕ್ಕೆ ಅತೀ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಕ್ರೀಡಾಂಗಣದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ ಹನ್ನೊಂದು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳ ಹೋಗುವ ವೇಳೆ ಈ ಘಟನೆ ನಡೆದಿದ್ದು ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೆ ಉಂಟಾಗಿ ಈ ದುರಂತ ಸಂಭವಿಸಿದೆ.
ipl-2025| ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಪಾರ ಅಭಿಮಾನಿ ಬಳಗವೇ ಹರಿದು ಬಂದಿತ್ತು.
ಇನ್ನೂ ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಈ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ, ಸರ್ಕಾರದಿಂದಲೇ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಣೆ ಹೊರಡಿಸಿದ್ದಾರೆ.
ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್ಸಿಬಿ ವಿಜಯೋತ್ಸವಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದಾರೆ, ವಿಧಾನಸೌಧದ ಕಾರ್ಯಕ್ರಮದ ವೇಳೆ ಯಾವುದೇ ದುರ್ಘಟನೆ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಡಣದಲ್ಲಿ ಅನಿರೀಕ್ಷಿತ ಘಟನೆ ನಡೆದಿದೆ. ಘಟನೆಯಲ್ಲಿ 35 ಜನರು ಗಾಯಗೊಂಡಿದ್ದಾರೆ, ಈ ಬಗ್ಗೆ ಸರ್ಕಾರ ದುಃಖವನ್ನು ವ್ಯಕ್ತ ಪಡಿಸುತ್ತದೆ, ಎಲ್ಲಾ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ್ದೇನೆ. ಜೊತೆಗೆ ಈ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸರ್ಕಾರದಿಂದಲೇ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಣೆ ಹೇಳಿದ್ದಾರೆ.