ಇಂಗ್ಲೆಂಡ್​ ವಿರುದ್ಧದ ಸರಣಿಗೆ ರಿಷಭ್ ಪಂತ್ ಲೆಕ್ಕಕ್ಕಿಲ್ಲ! ಭವಿಷ್ಯ ನುಡಿದ ಮಾಜಿ ಬ್ಯಾಟಿಂಗ್​ ಕೋಚ್ | Rishabh Pant

ವಿಜಯವಾಣಿ (63)
Published on

Rishabh Pant: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಸೋತ ಟೀಮ್ ಇಂಡಿಯಾ, 3-1 ಅಂತರದಲ್ಲಿ ಆಸೀಸ್​ ಎದುರು ಸೋಲಿಗೆ ಶರಣಾಯಿತು. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಲಗ್ಗೆಯಿಡುವಲ್ಲಿ ವಿಫಲವಾದ ಭಾರತದ ಆಟಗಾರರಿಗೆ ಹೆಡ್ ಕೋಚ್ ಗೌತಮ್ ಗಂಭೀರ್ ತಕ್ಕ ಕ್ಲಾಸ್​ ಕೂಡ ತೆಗೆದುಕೊಂಡರು. ಸರಣಿಯುದ್ದಕ್ಕೂ ಕಳಪೆ ಪ್ರದರ್ಶನ ತೋರಿದ ಕ್ಯಾಪ್ಟನ್ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಸೇರಿದಂತೆ ಒಂದಷ್ಟು ಆಟಗಾರರನ್ನು ಮುಂಬರುವ ಇಂಗ್ಲೆಂಡ್​ ಸರಣಿಯಿಂದ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ.

ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮ ದಿಗ್ಗಜ ಆಟಗಾರರಾಗಿ ಕಳಪೆ ಫಾರ್ಮ್​ ತೋರಿದರೆ, ಆಸೀಸ್​ ವಿರುದ್ಧ ವಿಕೆಟ್​ ಕೀಪರ್​-ಬ್ಯಾಟರ್​ ರಿಷಭ್ ಪಂತ್​ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೂ ಸಹ ಅವರನ್ನು ಮುಂಬರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದ ಕೈಬಿಡಲಾಗುವುದು ಎಂಬ ಮಾತುಗಳು ಕೇಳಿಬಂದಿವೆ. ಈ ಕುರಿತು ಭಾರತದ ಮಾಜಿ ಬ್ಯಾಟಿಂಗ್ ಕೋಚ್​ ಸಂಜಯ್ ಬಂಗಾರ್ ಪ್ರತಿಕ್ರಿಯಿಸಿದ್ದಾರೆ.

"ಇಂಗ್ಲೆಂಡ್​ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ರಿಷಬ್ ಪಂತ್​ರನ್ನು ಪರಿಗಣಿಸಲಾಗುವುದಿಲ್ಲ. ಏಕೆಂದರೆ, ಅವರ ಸ್ಥಾನವನ್ನು ವಿಕೆಟ್ ಕೀಪರ್, ಬ್ಯಾಟರ್​ ಸಂಜು ಸ್ಯಾಮ್ಸನ್ ಗಳಿಸಿದ್ದಾರೆ. ಇಲ್ಲಿ ಸಂಜು ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ವಿಕೆಟ್​ಕೀಪರ್ ಬ್ಯಾಟರ್‌ಗೆ ಒಂದೇ ಒಂದು ಸ್ಲಾಟ್ ಲಭ್ಯವಿದೆ ಮತ್ತು ನಾವು ಸಂಜು ಸ್ಯಾಮ್ಸನ್ ಅವರ ಪ್ರದರ್ಶನವನ್ನು ಗಣನೆಗೆ ತೆಗೆದುಕೊಂಡರೆ, ರಿಷಬ್ ಪಂತ್‌ಗೆ ಯಾವುದೇ ಸ್ಥಾನವಿಲ್ಲ. ಇಬ್ಬರು ವಿಕೆಟ್ ಕೀಪರ್ ಬ್ಯಾಟರ್‌ಗಳನ್ನು ಉಳಿಸಿಕೊಳ್ಳುವುದು ಕಷ್ಟ” ಎಂದು ಹೇಳಿದ್ದಾರೆ.

ಇದೇ ಜನವರಿ 22ರಿಂದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಟಿ20 ಪಂದ್ಯಗಳ ಸರಣಿ ಆರಂಭವಾಗಲಿದ್ದು, ಫೆಬ್ರವರಿ 6ರಿಂದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿ ಸೆಣಸಾಡಲಿವೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net