

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ವಿಕೆಟ್ ಕೀಪರ್/ಬ್ಯಾಟ್ಸ್ಮನ್ ಆಗಿ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಸ್ಥಾನ ಪಡೆದುಕೊಂಡಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪರವಾಗಿ ಅದ್ಭುತ ನಿರ್ವಹಣೆ ತೋರಿದ್ದ ದಿನೇಶ್ ಕಾರ್ತಿಕ್ ಮತ್ತೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿದ್ದರು. ಇದರಿಂದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲು ರಿಷಬ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ನಡುವೆ ತೀವ್ರವಾದ ಪೈಪೋಟಿ ಏರ್ಪಟ್ಟಿತ್ತು.
ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಬಲಗೈ ಬ್ಯಾಟ್ಸ್ಮನ್ ಆಗಿರುವ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಏಷ್ಯಾಕಪ್ ವೇಳೆ ಗಾಯದಿಂದಾಗಿ ಆಲ್ರೌಂಡರ್ ರವೀಂದ್ರ ಜಡೇಜಾ ತಂಡದಿಂದ ಹೊರನಡೆದಿದ್ದರು. ಇದೀಗ ಅವರ ಜವಾಬ್ದಾರಿಯನ್ನು ಅಕ್ಷರ್ ಪಟೇಲ್ಗೆ ವಹಿಸಲಾಗಿದೆ. ಇದೀಗ ದಿನೇಶ್ ಕಾರ್ತಿಕ್ ಆಯ್ಕೆಯಿಂದಾಗಿ ರಿಷಬ್ ಪಂತ್ ಹೊರಗುಳಿದಿದ್ದಾರೆ. ಹೀಗಾಗಿ ಅಕ್ಷರ್ ಪಟೇಲ್ ತಂಡದಲ್ಲಿರುವಏಕೈಕ ಎಡಗೈ ಬ್ಯಾಟ್ಸ್ಮನ್.
ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. (ಏಜೆನ್ಸೀಸ್)
ಭಾರತ ತಂಡ: ರೋಹಿತ್ ಶರ್ಮ(ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಯಜುವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್.