ಐಪಿಎಲ್​ನಲ್ಲಿ ಆಡುವ ಬಗ್ಗೆ ನಿರೀಕ್ಷೆ ಮೂಡಿಸಿದ ಪಂತ್; ಒಮ್ಮೆ ಈ ವಿಡಿಯೋ ನೋಡಿ

Rishabh Pant
Published on

ದುಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ತಯಾರಿ ಆರಂಭಿಸಿದೆ. ಸುದ್ದಿ ಮೂಲಗಳ ಪ್ರಕಾರ ಮಾರ್ಚ್​ 22ರಂದು ಟೂರ್ನಿ ಆರಂಭವಾಗಲಿದ್ದು, ಮಿನಿ ಹರಾಜು ಕಾರ್ಯಕ್ರಮದ ಬಳಿಕ ಬಿಸಿಸಿಐ ವೇಳಾಪಟ್ಟಿ ಸಿದ್ದತೆಯಲ್ಲಿ ತೊಡಗಿಸಿಕೊಂಡಿದೆ.

ಮಂಗಳವಾರ (ಡಿಸೆಂಬರ್ 19) ದುಬೈನಲ್ಲಿ ನಡೆದ ಐಪಿಎಲ್​ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ ವಿಕೆಟ್​ ಕೀಪರ್​, ಬ್ಯಾಟ್ಸ್​ಮನ್​ ರಿಷಬ್​ ಪಂತ್​ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರೊಂದಿಗೆ ಟೆನಿಸ್ ಆಡುತ್ತಿರುವ ಪೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಮಂಗಳವಾರ (ಡಿಸೆಂಬರ್ 19) ದುಬೈನಲ್ಲಿ ನಡೆದ ಐಪಿಎಲ್​ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ ಪಂತ್​ ಬಳಿಕ ಮಹೇಂದ್ರ ಸಿಂಗ್​ ಧೋನಿ ಅವರೊಂದಿಗೆ ಟೆನಿಸ್​ ಆಡಿದ್ದಾರೆ. ಇವರ ಜೊತೆಗೆ ಆಶಿಶ್​ ನೆಹ್ರಾ ಕೂಡ ಇದ್ದರು ಎಂದು ಹೇಳಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಅಪಘಾತಕ್ಕೊಳಕ್ಕಾಗಿ ಚೇತರಿಕೆ ಕಾಣುತ್ತಿರುವ ರಿಷಭ್ ಪಂತ್​ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದು ಮುಂದಿನ ವರ್ಷ ಕ್ರಿಕೆಟ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

ರಿಷಭ್​ ಪಂತ್​ ಪಂತ್​ ಅವರು 2024ರ ಐಪಿಎಲ್​ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತ ಎಂದು ಈಗಾಗಕೇ ಡೆಲ್ಲಿ ಕ್ಯಾಪಿಟಲ್ಸ್​ ದೃಢಪಡಿಸಿದೆ. ಸುಮಾರು ಒಂದು ವರ್ಷದಿಂದ ಕ್ರಿಕೆಟ್​ ಕ್ಷೇತ್ರದಿಂದ ಹೊರಗುಳಿದಿರುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ 2024ರ ಐಪಿಎಲ್-17ರಲ್ಲಿ ಆಡುವ ಜೊತೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮ್ಯಾನೇಜ್‌ಮೆಂಟ್ ಖಚಿತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net