ನಾಯಕನಾಗಿ ವಿರಾಟ್​ ಕೊಹ್ಲಿ ದಾಖಲೆ ಸರಿಗಟ್ಟಿದ್ದ ಹಿಟ್​ಮ್ಯಾನ್​

Virat Rohit
Published on

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರನೇ ಹಾಗೂ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಶತಕ ಬಾರಿಸಿದ್ದು, ಈ ಮೂಲಕ ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ ನಾಯಕ ರೋಹಿತ್​ ಶರ್ಮಾ (121 ರನ್, 69 ಎಸೆತ, 11 ಬೌಂಡರಿ, 8 ಸಿಕ್ಸರ್​), ರಿಂಕು ಸಿಂಗ್​ (69 ರನ್, 39 ಎಸೆತ, 2 ಬೌಂಡರಿ, 6 ಸಿಕ್ಸರ್​) ಸ್ಫೋಟಕ ಬ್ಯಾಟಿಂಗ್​ ಫಲವಾಗಿ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್​ ಗಳಿಸಿತ್ತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಟಿ-20 ಕ್ರಿಕೆಟ್​ನಲ್ಲಿ ಐದು ಶತಕಗಳನ್ನು ಬಾರಿಸಿದ ದಾಖಲೆ ಬರೆದರು. ಇದಲ್ಲದೆ ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ತಂಡದ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ರೋಹಿತ್​ ಶರ್ಮಾ ಶತಕ ಬಾರಿಸುವ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ನಾಯಕನಾಗಿ 54 ಪಂದ್ಯಗಳನ್ನು ಆಡಿರುವ ರೋಹಿತ್​ ಶರ್ಮಾ 10 ಅರ್ಧಶತಕ, 2 ಶತಕ ಒಳಗೊಂಡಂತೆ 1573 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ತಂಡದ ನಾಯಕನಾಗಿ ವಿರಾಟ್​ ಕೊಹ್ಲಿ 50 ಪಂದ್ಯಗಳಲ್ಲಿ 13 ಅರ್ಧಶತಕಗಳನ್ನು ಒಳಗೊಂಡಂತೆ 1570 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. 1112 ರನ್‌ ಬಾರಿಸುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್​ ತಂಡದ ಮಾಜಿ ನಾಯಕ ಆರನ್​ ಫಿಂಚ್​ 2236 ರನ್‌ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ನಾಯಕರ ಪೈಕಿ ಅಗ್ರಸ್ಥಾನದಲ್ಲಿದ್ದಾರೆ. 2195 ರನ್‌ಗಳನ್ನು ಗಳಿಸುವ ಪಾಕಿಸ್ತಾನದ ಬಾಬರ್​ ಅಜಂ ಎರಡನೇ ಸ್ಥಾನದಲ್ಲಿದ್ದಾರೆ. 71 ಪಂದ್ಯಗಳನ್ನು ಆಡಿರುವ ನ್ಯೂಜಿಲೆಂಡ್​ನ ಕೇನ್​ ವಿಲಿಯಮ್ಸನ್​ 2125 ರನ್ ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net