ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ರೋಹಿತ್​​ ಶರ್ಮಾ ಇಂಜುರಿ!

RohitSharma
Published on

ಅಡಿಲೇಡ್: ಓವಲ್ ಮೈದಾನದಲ್ಲಿ ಭಾರತ - ಇಂಗ್ಲೆಂಡ್ ನಡುವೆ ಟಿ-20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಾಟ ನಡೆಯಲಿದೆ. ಇದೀಗ ಈ ಪಂದ್ಯಕ್ಕೂ ಮುನ್ನ ಭಾರತಕ್ಕೆ ತಂಡಕ್ಕೆ ಆಘಾತ ಉಂಟಾಗಿದೆ. ಬ್ಯಾಟಿಂಗ್ ಅಭ್ಯಾಸದ ವೇಳೆ ನಾಯಕ ರೋಹಿತ್​ ಶರ್ಮಾ ತಮ್ಮ ಬಲ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.

ರೋಹಿತ್ ಶರ್ಮಾ ಕೈಗೆ ಪೆಟ್ಟಾಗುತ್ತಿದ್ದಂತೆ, ಅಭ್ಯಾಸವನ್ನು ಅರ್ಧದಿಂದಲೇ ಬಿಟ್ಟು ತೆರಳಿದ್ದಾರೆ. ಕೂಡಲೇ ವೈದ್ಯಕೀಯ ಸಿಬ್ಬಂದಿಗಳು ರೋಹಿತ್ ಶರ್ಮಾ ಅವರನ್ನು ಪರೀಕ್ಷಿಸಿ, ಚಿಕಿತ್ಸೆ ನೀಡಿದ್ದಾರೆ. ಇದೀಗ ತಂಡದ ನಾಯಕನಿಗೆ ಇಂಜುರಿ ಉಂಟಾಗಿರುವುದು ತಂಡದ ಮ್ಯಾನೇಜ್​ಮೆಂಟ್​ಗೆ ತಲೆನೋವಾಗಿದೆ.

ರೋಹಿತ್​ ಶರ್ಮಾಗೆ ಇಂಜುರಿಯಾಗಿರುವ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತವಾಗಿ ಮಾಹಿತಿ ಹೊರಹಾಕಿಲ್ಲ. ನಂ.10 ರಂದು ಸೆಮಿಫೈನಲ್ ಪಂದ್ಯ ನಡೆಯಲಿದೆ. ಮೇಲ್ನೋಟಕ್ಕೆ ಸಣ್ಣದಾಗಿ ಇಂಜುರಿಗೆ ಒಳಗಾಗಿರುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರೂ ಆದಷ್ಟು ಬೇಗ ನಾಯಕ ರೋಹಿತ್ ಶರ್ಮಾ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಸೆಮಿಫೈನಲ್ ಪಂದ್ಯ ಆಡದೇ ಉಳಿದರೆ, ಉಪನಾಯಕ ಕೆ.ಎಲ್.ರಾಹುಲ್ ತಂಡ ಮುನ್ನಡೆಸುವ ಸಾಧ್ಯತೆ ಇದೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net