ಏಕದಿನ ಸರಣಿಗೆ ಲಂಕಾ ತಲುಪಿದ ರೋಹಿತ್-ಕೊಹ್ಲಿ: ಅಭ್ಯಾಸಕ್ಕೆ ಮಳೆ ಅಡ್ಡಿ

New-Project-4-2
Published on

ಪಲ್ಲೆಕಿಲೆ: ಸರ್ವಾಂಗೀಣ ನಿರ್ವಹಣೆಯೊಂದಿಗೆ ಸರಣಿ ವಶಪಡಿಸಿಕೊಂಡಿರುವ ಟಿ20 ವಿಶ್ವ ಚಾಂಪಿಯನ್ ಭಾರತ ತಂಡ ಇದೀಗ ಕ್ಲೀನ್‌ಸ್ವೀಪ್ ಸಾಧಿಸುವ ತವಕದಲ್ಲಿದೆ. ಆತಿಥೇಯ ಶ್ರೀಲಂಕಾ ವಿರುದ್ಧ ಮಂಗಳವಾರ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಡೆಯಲಿದೆ. ಭರ್ಜರಿ ಆರಂಭ ಕಂಡಿರುವ ನಾಯಕ ಸೂರ್ಯಕುಮಾರ್ ಹಾಗೂ ಕೋಚ್ ಗೌತಮ್ ಗಂಭೀರ್ ಜೋಡಿ ಲಯ ಕಾಯ್ದುಕೊಳ್ಳುವ ನಿರೀಕ್ಷೆಯಿದ್ದು, ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ರೋಹಿತ್-ಕೊಹ್ಲಿ ಅಭ್ಯಾಸಕ್ಕೆ ಮಳೆ ಅಡ್ಡಿ: ಟೀಮ್ ಇಂಡಿಯಾ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮ, ಸ್ಟಾರ್ ಬ್ಯಾಟರ್‌ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಆಗಸ್ಟ್ 2ರಂದು ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾನುವಾರ ದ್ವೀಪರಾಷ್ಟ್ರ ತಲುಪಿದ್ದಾರೆ. ಸೋಮವಾರ ಸಂಜೆ ನೂತನ ಸಹಾಯಕ ಕೋಚ್ ಅಭಿಷೇಕ್ ನಾಯರ್ ಮಾರ್ಗದರ್ಶನದಲ್ಲಿ ನಿಗದಿಯಾಗಿದ್ದ ಅಭ್ಯಾಸ ಅವಧಿ ಮಳೆಯಿಂದಾಗಿ ರದ್ದುಗೊಂಡಿದೆ. ಕುಲದೀಪ್ ಯಾದವ್, ಹರ್ಷಿತ್ ರಾಣಾ ಸಹ ಲಂಕಾ ತಲುಪಿದ್ದಾರೆ. ಟಿ20 ವಿಶ್ವಕಪ್ ಬಳಿಕ ಒಂದು ತಿಂಗಳ ರಜೆ ಮೂಡ್‌ಗೆ ಜಾರಿದ್ದ ರೋಹಿತ್-ಕೊಹ್ಲಿ ಏಕದಿನ ಸರಣಿಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದು, ಭಾನುವಾರ ಕೊಲಂಬೊ ತಲುಪಿದ್ದಾರೆ. ಇನ್ನು 2023ರ ಡಿಸೆಂಬರ್‌ನಲ್ಲಿ ಟೀಮ್ ಇಂಡಿಯಾ ಪರ ಕೊನೆಯದಾಗಿ ಏಕದಿನ ಪಂದ್ಯವನ್ನಾಡಿರುವ ಶ್ರೇಯಸ್ ಅಯ್ಯರ್ ರಾಷ್ಟ್ರೀಯ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಎಲ್ಲ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net