

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮ (Rohit Sharma) ಪ್ರಸ್ತುತ ರನ್ ಬರವನ್ನು ಎದುರಿಸುತ್ತಿದ್ದು, ಈ ಇಬ್ಬರು ಆಟಗಾರರು ತಮ್ಮ ಫಾರ್ಮ್ ನಿರೂಪಿಸಲು ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದ ರೋಹಿತ್ ಶರ್ಮ ಎರಡು ಇನ್ನಿಂಗ್ಸ್ನಲ್ಲಿ 31 ರನ್ಗಳಿಸಲಷ್ಟೇ ಶಕ್ತರಾದರು. ಜನವರಿ 30ರಂದು ರೈಲ್ವೇಸ್ ವಿರುದ್ಧ ಆರಂಭವಾಗಲಿರುವ ಪಂದ್ಯದಲ್ಲಿ ಕೊಹ್ಲಿ ದೆಹಲಿ ಪರ ಕಣಕ್ಕಿಳಿಯಲಿದ್ದು, ಅವರ ಪ್ರದರ್ಶನದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
ಇನ್ನೂ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮ (Rohit Sharma) ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುತ್ತಿರುವುದು ಯಾಕೋ ಪಾಕಿಸ್ತಾನಕ್ಕೆ ಸರಿ ಕಾಣುತ್ತಿಲ್ಲವಂತೆ. ಬಿಸಿಸಿಐನ ಹೊಸ ನಿರ್ಧಾರಕ್ಕೆ ಕಿಡಿಕಾರಿರುವ ಪಾಕಿಸ್ತಾನದ ಮಾಜಿ ಆಟಗಾರ ರಶೀದ್ ಲತೀಫ್ ಈ ಬಗ್ಗೆ ಮಾತನಾಡಿದ್ದು, ರೋಹಿತ್ ಹಾಗೂ ವಿರಾಟ್ ವೈಟ್ಬಾಲ್ ಕ್ರಿಕೆಟ್ ಮೇಲೆ ಹೆಚ್ಚು ಫೋಕಸ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
IANSಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಲತೀಫ್, ಅಂತಾರಾಷ್ಟ್ರೀಯ ಕ್ಯಾಲೆಂಡರ್ ಗಮನಿಸಿದಾಗ ಆಟಗಾರರಿಗೆ ದೇಶೀಯ ಕ್ರಿಕೆಟ್ ಟೂರ್ನಿ ಆಡಲು ಬಿಡುವಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಅಗತ್ಯವಿದ್ದರೆ ಅವರು ದೇಶೀಯ ಕ್ರಿಕೆಟ್ನಲ್ಲಿ ಆಡಬೇಕು ಆದರೆ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿಯನ್ನು (Virat Kohli) ಗುರಿ ಮಾಡಲಾಗಿದ್ದು, ಒತ್ತಾಯಪೂರ್ವಕವಾಗಿ ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಆಡುವಂತೆ ಮಾಡಲಾಗುತ್ತಿದೆ.
ಈ ಹಿಂದೆ ಸಚಿನ್ ತೆಂಡೂಲ್ಕರ್ ಹೊರತುಪಡಿಸಿ, ಇತರರು ಹೆಚ್ಚು ದೇಶೀಯ ಕ್ರಿಕೆಟ್ ಆಡಿಲ್ಲ. ರೋಹಿತ್ ಮತ್ತು ವಿರಾಟ್ ಅವರು ದೇಶೀಯ ಕ್ರಿಕೆಟ್ ಆಡದೆ T20 ವಿಶ್ವಕಪ್ ಗೆದ್ದಿದ್ದಾರೆ ಮುಂದೆ ಇಂಗ್ಲೆಂಡ್ ವಿರುದ್ಧದ ODI ಸರಣಿಯನ್ನು ಆಡುತ್ತಾರೆ. ವೈಟ್ಬಾಲ್ ಕ್ರಿಕೆಟ್ ಸಂಪೂರ್ಣ ವಿಭಿನ್ನವಾಗಿರುವುದರಿಂದ ಇವರಿಬ್ಬರು ಹೆಚ್ಚಾಗಿ ಇದರ ಮೇಲೆ ಫೋಕಸ್ ಮಾಡಬೇಕು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ರಶೀದ್ ಲತೀಫ್ IANSಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.