

Ipl | ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು (13) ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿ ಪಂದ್ಯ ಎದುರಿಸಿದವು. ಇಂಡಿಯನ್ ಪ್ರೀಮಿಯರ್ ಲೀಗ್ 2025 ರ ಋತುವಿನ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಆತಿಥೇಯ ರಾಜಸ್ಥಾನ ತಂಡ 9 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿತು.
ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್‌ಸಿಬಿ ರಾಜಸ್ಥಾನವನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಆರ್‌ಸಿಬಿ ತಂಡದ ಪರ ಫಿಲ್ ಸಾಲ್ಟ್ 33 ಎಸೆತಗಳಲ್ಲಿ 65 ರನ್, ವಿರಾಟ್ ಕೊಹ್ಲಿ 62 ರನ್ ಮತ್ತು ದೇವದತ್ ಪಡಿಕ್ಕಲ್ 40 ರನ್ ಗಳಿಸಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು.
ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ, ರಾಜಸ್ಥಾನ್ ರಾಯಲ್ಸ್ ಆಟಗಾರರನ್ನು ಬ್ಯಾಟಿಂಗ್ ಮಾಡಲು ಆಹ್ವಾನ ಮಾಡಿದರು. ರಾಜಸ್ಥಾನ ರಾಯಲ್ಸ್ 20 ಓವರ್ಗಳಲ್ಲಿ 4 ವಿಕೆಟ್ಗೆ 174 ರನ್ಗಳ ಸಾಧಾರಣ ಟಾರ್ಗೆಟ್ ಅನ್ನು ನೀಡಿತ್ತು. ಈ ಗುರಿ ಬೆನ್ನು ಹತ್ತಿದ್ದ ಆರ್‌ಸಿಬಿ ಆರಂಭದಲ್ಲೇ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿತು. ನಂತರ 17.3 ಓವರ್ಗಳಲ್ಲಿ 1 ವಿಕೆಟ್ಗೆ 175 ರನ್ ಗಳಿಸಿ ಆರ್‌ಸಿಬಿ ಗೆಲುವು ಸಾಧಿಸಿತು.