

ಮುಂಬೈ: 2023ನೇ ಏಕದಿನ ವಿಶ್ವಕಪ್ ಟೂರ್ನಿಯ ನಾಕೌಟ್ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು (ನವೆಂಬರ್ 15) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡ ಸೆಣಸಾಡಲಿದೆ. ಇಂದುನ ನಡೆಯುವ ಪಂದ್ಯದ ಮತ್ತೊಂದು ವಿಶೇಷತೆ ಏನೆಂದರೆ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದವು.
ಇಂಗ್ಲೇಂಡ್ನ ಮ್ಯಾಂಚೆಸ್ಟರ್ನಲ್ಲಿ ನಡೆದ ಮಳೆಭಾದಿತ ಸೆಮಿಫೈನಲ್ ಪಂದ್ಯದಲ್ಲಿ ಭಾರತ 18ರನ್ಗಳ ಅಂತರದಲ್ಲಿ ಸೋತು ಫೈನಲ್ಗೆ ಏರುವಲ್ಲಿ ವಿಫಳವಾಗಿತ್ತು. ಇದೀಗ ನಾಲ್ಕು ವರ್ಷಗಳ ಬಳಿಕ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದಾಗಿದೆ.
ಇನ್ನು ಪಂದ್ಯ ನಡೆಯುವ ವಾಂಖೆಡೆ ಕ್ರೀಡಾಂಗಣದ ಪಿಚ್ ಅತ್ಯಂತ ಸಮತೋಲುಇತ ಪಿಚ್ ಎಂದು ಹೇಳಲಾಗಿದೆ. ಏಕೆಂದರೆ . ಈ ಪಿಚ್ ಬ್ಯಾಟರ್ಗಳಿಗೆ ಸಹಕಾರಿ. ಹೀಗಾಗಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ದುಕೊಂಡು ಬೃಹತ್ ಮೊತ್ತ ಪೇರಿಸುವ ಸಾಧ್ಯತೆಯಿದೆ. ಹಾಗೆಯೇ ಈ ಮೈದಾನದಲ್ಲಿ ಚೇಸಿಂಗ್ ಕೂಡ ಕಷ್ಟಕರವಲ್ಲ. ದ್ವಿತೀಯ ಇನಿಂಗ್ಸ್ ವೇಳೆ ಇಬ್ಬನಿ ಕಂಡು ಬಂದರೆ ಅನಾಯಾಸವಾಗಿ ಚೇಸಿಂಗ್ ಮಾಡಬಹುದು. ಹೀಗಾಗಿಯೇ ಇದನ್ನು ಪರಿಗಣಿಸಿ ಟಾಸ್ ಗೆದ್ದ ಮೊದಲು ಬೌಲಿಂಗ್ ಮಾಡಿದರೂ ಅಚ್ಚರಿಪಡಬೇಕಿಲ್ಲ.
ಬುಧವಾರ ಮುಂಬೈನಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಅಲ್ಲದೆ ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಕಡಿಮೆ ಇದೇ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡುವ ಸಾಧ್ಯತೆಯಿಲ್ಲ. ಇನ್ನು ಏರಿಳಿತವನ್ನು ನಿರೀಕ್ಷಿಸಲಾಗಿದೆ.
ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಯಾರು ಬಲಿಷ್ಠ ಎಂಬ ವಿಚಾರಕ್ಕೆ ಬಂದರೆ ಲೀಗ್ ಹಂತದ ಪಂದ್ಯಗಳಲ್ಲಿ ಅಜೇಯವಾಗಿ ಟೇಬಲ್ ಟಾಪರ್ ಆಗಿರುವ ಭಾರತ ತಂಡವೇ ಹಾಟ್ ಫೇವರಿಟ್ ಎಂದು ಹೇಳಲಾಗಿದೆ. ಏಕೆಂದರೆ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಸಮತೋಲಿತ ಪ್ರದರ್ಶನವನ್ನು ನೀಡಿರುವ ಭಾರತ ತಂಡವು ಕಿವೀಸ್ ಮಣಿಸಿ ಫೈನಲ್ ಪ್ರವೇಶಿಸುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಇದುವರೆಗೆ 117 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ 59 ಬಾರಿ ವಿಜಯಶಾಲಿಯಾಗಿದೆ. ಮತ್ತೊಂದೆಡೆ ಕಿವೀಸ್ 50 ಏಕದಿನ ಪಂದ್ಯಗಳಲ್ಲಿ ಭಾರತವನ್ನು ಸೋಲಿಸಿದೆ. ಇನ್ನು ಲೀಗ್ ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ 4 ವಿಕೆಟ್ಗಳಿಂದ ಜಯ ಸಾಧಿಸಿತ್ತು.
ವಾಂಖೆಡೆ ಕ್ರೀಡಾಂಗಣದಲ್ಲಿ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 4 ಪಂದ್ಯಗಳು ನಡೆದಿದ್ದು, ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 300+ ಸ್ಕೋರ್ಗಳಿಸಿದೆ. ಹೀಗಾಗಿ ಈ ಸಲ ಕೂಡ ಬೃಹತ್ ಮೊತ್ತದೊಂದಿಗೆ ಪಂದ್ಯ ಗೆಲ್ಲಲು ಉಭಯ ತಂಡಗಳು ಪ್ಲ್ಯಾನ್ ರೂಪಿಸಬಹುದು. ಹೀಗಾಗಿ ಮೊದಲ ಸೆಮಿಫೈನಲ್ನಲ್ಲಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡುವುದು ಖಚಿತ ಎಂದೇ ಹೇಳಬಹುದು.