ಐಪಿಎಲ್​ ಬಳಿಕ ಸಪ್ತಪದಿ ತುಳಿಯಲಿದ್ದಾರೆ ಸ್ಫೋಟಕ ಬ್ಯಾಟ್ಸಮನ್

Marriage
Published on

ದೆಹಲಿ: ಪ್ರಸ್ತುತ ಐಪಿಎಲ್​ ಕೊನೆಯ ಹಂತಕ್ಕೆ ಬಂದು ತಲುಪಿದ್ದು, ಈ ಬಾರಿ ಕಪ್​ನ್ನು ಯಾರು ಗೆಲ್ಲುತ್ತಾರೆ ಎಂಬ ಕೌತುಕ ಹೆಚ್ಚಾಗಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಋತುರಾಜ್​ ಗಾಯಕ್ವಾಡ್ ಐಪಿಎಲ್​ ಬಳಿಕ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಶುಭ ಸುದ್ದಿಯೊಂದು ಹೊರಬಿದ್ದಿದೆ.

ಈ ಹಿನ್ನೆಲೆಯಲ್ಲಿ ಋತುರಾಜ್​ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪಂದ್ಯಗಳನ್ನು ಅಲಭ್ಯರಾಗುವ ಸಾಧ್ಯತೆ ಹೆಚ್ಚಾಗಿದೆ. ಜೂನ್​ 2 ಮತ್ತು 3ರಂದು ಮದುವೆ ಸಮಾರಂಭವಿರುವ ಕಾರಣ ಈ ಪಂದ್ಯಗಳಿಗೆ ಗೈರಾಗಲಿದ್ದು, ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೆ ಅಲಭ್ಯರಾಗಿದ್ದಾರೆ. ಜೂನ್​ 7ರಂದು ಇಂಗ್ಲೆಂಡ್​ನ ಲಂಡನ್​ನ ದಿ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಈ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಚಾಂಪಿಯನ್​ ಪಟ್ಟಕ್ಕಾಗಿ ಭಾರತ-ಆಸ್ಟ್ರೇಲಿಯಾ ಸೆಣಸಾಟ ನಡೆಸಲಿವೆ.

ಇನ್ನು ಋತುರಾಜ್​ ಹಾಗೂ ಮಹಾರಾಷ್ಟ್ರದ ಕ್ರಿಕೆಟ್ ಆಟಗಾರ್ತಿ ಉತ್ಕರ್ಷ ಪವಾರ್ ಮದುವೆ ನಡೆಯಲಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದು, ಎರಡೂ ಕುಟುಂಬಗಳು ಕೂಡ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿಲ್ಲ. ಕೆಲ ದಿನಗಳ ಹಿಂದೆ ಇವರಿಬ್ಬರು ಜಿಮ್‌ನಲ್ಲಿ ಒಟ್ಟಿಗೆ ತೆಗೆಸಿಕೊಂಡ ಫೋಟೋವೊಂದು ಭಾರೀ ವೈರಲ್ ಆಗಿತ್ತು.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net