

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿ ವಿ. ರಾಧಾ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಏಕಲವ್ಯ ಪ್ರಶಸ್ತಿ ದೊರೆತಿದೆ.
ಜಿಲ್ಲೆಯ ಬೊಮ್ಮಸಂದ್ರ ಗ್ರಾಮದ ವಿದ್ಯಾರ್ಥಿನಿಯಾಗಿರುವ ರಾಧಾ, ಬೆಂಗಳೂರಿನ ಕೆ.ಆರ್. ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಸರ್ಕಾರವು ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾಪಟುಗಳಿಗೆ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ವಿದ್ಯಾರ್ಥಿನಿ ವಿ. ರಾಧಾ ಆಯ್ಕೆಗೊಂಡಿರುವುದಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.
ಅವರಿಗೆ ಇಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. (ದಿಗ್ವಿಜಯ ನ್ಯೂಸ್)