

ಮುಂಬೈ: ವಿಶ್ವ ಕ್ರಿಕೆಟ್ನ ಇಬ್ಬರು ದಿಗ್ಗಜರಾದ ಸಚಿನ್ ತೆಂಡುಲ್ಕರ್ ಹಾಗೂ ಬ್ರಿಯಾನ್ ಲಾರಾ ಮತ್ತೊಮ್ಮೆ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿದ್ದಾರೆ.
ಅನ್ಅಕಾಡೆಮಿ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ ಟಿ20 ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ಹಾಗೂ ವೆಸ್ಟ್ ಇಂಡೀಸ್ ಲೆಜೆಂಡ್ಸ್ ಎದುರಾಗಲಿವೆ. ಮಾರ್ಚ್ 7 ರಂದು ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 11 ಪಂದ್ಯಗಳಿದ್ದು, ಮೊದಲ ಪಂದ್ಯದಲ್ಲಿ ಸಚಿನ್ ಹಾಗೂ ಲಾರಾರ ತಂಡಗಳು ಎದುರಾಗಲಿವೆ. ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ, ವೆಸ್ಟ್ ಇಂಡೀಸ್ನ ಮಾಜಿ ಆಟಗಾರರು ಆಡಲಿದ್ದಾರೆ.