ಬೆಂಗಳೂರು ಕಾಲ್ತುಳಿತ ಹೃದಯವಿದ್ರಾವಕ ದುರಂತ, ಸಂತ್ರಸ್ತರಿಗೆ ನನ್ನ ಹೃದಯ ಮಿಡಿಯುತ್ತದೆ: ಸಚಿನ್ ತೆಂಡೂಲ್ಕರ್ ..sachin tendulkar

sachin tendulkar for web
Published on

ಬೆಂಗಳೂರು: (sachin tendulkar) ಆರ್‌ಸಿಬಿ ವಿಜಯೋತ್ಸವದ ಸಂದರ್ಭದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಈ ದುರಂತಕ್ಕೆ ಸಚಿನ್ ತೆಂಡೂಲ್ಕರ್ ಸಂತಾಪ ಸೂಚಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆರ್‌ಸಿಬಿ ನೀಡಿದ್ದ 191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡವು ಕೇವಲ 184 ರನ್‌ಗಳಿಗೆ ಆಲೌಟ್ ಆಗಲು ಸಾಧ್ಯವಾಯಿತು. ಗೆಲುವಿನ ಸಂಭ್ರಮಾಚರಣೆ ದುರಂತವಾಗಿ ಮಾರ್ಪಟ್ಟಿತು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಆತಂಕ ಇದೆ. ಇದಕ್ಕೆಲ್ಲ ಕಾರಣ ಆಗಿದ್ದು ಅತಿಯಾದ ಅಭಿಮಾನ. ಐಪಿಎಲ್ ಕಪ್ ಗೆದ್ದ ಖುಷಿಯಲ್ಲಿ ಬೆಂಗಳೂರಿಗೆ ಬಂದ ಆರ್​ಸಿಬಿ ತಂಡವನ್ನು ನೋಡುವ ಭರದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. 47ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

"ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತ ಹೃದಯವಿದ್ರಾವಕ. ಸಂತ್ರಸ್ತರಿಗೆ ನನ್ನ ಹೃದಯ ಮಿಡಿಯುತ್ತದೆ. ಎಲ್ಲರಿಗೂ ಶಾಂತಿ ಮತ್ತು ಶಕ್ತಿಯನ್ನು ಹಾರೈಸುತ್ತೇನೆ" ಎಂದು ಸಚಿನ್ ತಮ್ಮ ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net