

ಬೆಂಗಳೂರು: ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್, ಶಾಲಾ ಕ್ರಿಕೆಟ್ ಟೂರ್ನಿಯಲ್ಲಿ ಮತ್ತೊಮ್ಮೆ ಆಲ್ರೌಂಡ್ ನಿರ್ವಹಣೆ ಮೂಲಕ ಗಮನ ಸೆಳೆದಿದ್ದಾರೆ.
ಸಮಿತ್ ದ್ರಾವಿಡ್ (166 ರನ್, 131 ಎಸೆತ, 24 ಬೌಂಡರಿ, 35ಕ್ಕೆ 4 ವಿಕೆಟ್) ಆಲ್ರೌಂಡ್ ನಿರ್ವಹಣೆಯಿಂದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡ 14 ವಯೋಮಿತಿ ಬಿಟಿಆರ್ ಶೀಲ್ಡ್ ಕ್ರಿಕೆಟ್ ಟೂರ್ನಿಯ ಎಂಟರ ಘಟ್ಟದ ಪಂದ್ಯದಲ್ಲಿ 148 ರನ್ಗಳಿಂದ ವಿದ್ಯಾಶಿಲ್ಪ ಅಕಾಡೆಮಿ ತಂಡವನ್ನು ಸೋಲಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಮಲ್ಯ ಅದಿತಿ ಶಾಲಾ ತಂಡ 50 ಓವರ್ಗಳಲ್ಲಿ 5 ವಿಕೆಟ್ಗೆ 330 ರನ್ಗಳಿಸಿದರೆ, ವಿದ್ಯಾಶಿಲ್ಪ ಅಕಾಡೆಮಿ ತಂಡ 38.5 ಓವರ್ಗಳಲ್ಲಿ 182 ರನ್ಗಳಿಗೆ ಸರ್ವಪತನ ಕಂಡಿತು. ಶಾಲಾ ಮಟ್ಟದ ಕ್ರಿಕೆಟ್ನಲ್ಲಿ ಸಮಿತ್ ಕಳೆದ ಎರಡು ತಿಂಗಳ ಅಂತರದಲ್ಲಿ 2 ದ್ವಿಶತಕ ಸಿಡಿಸಿ ಮಿಂಚಿದ್ದರು.