ವಿರಾಟ್ ಕೊಹ್ಲಿಯ ದಾಖಲೆಯನ್ನು ಹಿಂದಿಕ್ಕಿದ ಸಂಜು ಸ್ಯಾಮ್ಸನ್; ಯಾವುದು ಆ ವಿಶಿಷ್ಟ ದಾಖಲೆ?

Sanjusamson
Published on

ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅರ್ಧಶತಕ ಸಿಡಿಸುವ ಮೂಲಕ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಸಂಜು ಸ್ಯಾಮ್ಸನ್ 32 ಎಸೆತಗಳಲ್ಲಿ 55 ರನ್ ಗಳಿಸಿದರು. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 700 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ಇದರೊಂದಿಗೆ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಯ ದಾಖಲೆಯನ್ನು ಹಿಂದಿಕ್ಕಿದ್ದರು.

ಸದ್ಯ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಅತೀ ಹೆಚ್ಚು ರನ್ ಗಳಿಸಿದರವ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ (725 ರನ್) ಅಗ್ರಸ್ಥಾನಿಯಾಗಿದ್ದಾರೆ. ವಿರಾಟ್ ಕೊಹ್ಲಿ 569 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಮವಾಗಿ ಶೇನ್ ವ್ಯಾಟ್ಸನ್ (566), ಎ.ಬಿ.ಡಿವಿಲಿಯರ್ಸ್ (540) ಹಾಗೂ ಅಂಬಟಿ ರಾಯುಡು (540) ಗಳಿಸಿದ್ದಾರೆ.

ಸಂಜು ಸ್ಯಾಮ್ಸನ್ 20 ಇನಿಂಗ್ಸ್​ಗಳಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಒಟ್ಟು 725 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net