

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಲೀಗ್ ಆಗಿದ್ದು, ಮೊದಲ ಬಾರಿಗೆ ಇದರ ಆವೃತ್ತಿಯನ್ನು ಬಿಸಿಸಿಐ 2008 ರಲ್ಲಿ ಆಯೋಜಿಸಿತು. ಒಟ್ಟು 16 ಸೀಸನ್ಗಳನ್ನು ಮುಗಿಸಿರುವ ಐಪಿಎಲ್‌ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಸೌದಿ ಅರೇಬಿಯಾ ಯೋಜಿಸಿದೆ ಎಂದು ಹೇಳಲಾಗಿದೆ.
ಐಪಿಎಲ್‌ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸುತ್ತಿದ್ದು, ಇದು 30 ಬಿಲಿಯನ್ ಡಾಲರ್ ಮೌಲ್ಯದ್ದಾಗಿದೆ ಮತ್ತು ಲೀಗ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲಿದೆ. ಯುಎಇ ಕ್ರಿಕೆಟ್‌ನಲ್ಲಿ ಹೂಡಿಕೆ ಮಾಡಲು ಉತ್ಸುಕವಾಗಿದೆ ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿದ್ದಾರೆ.
ಏಕದಿನ ವಿಶ್ವಕಪ್ 2023ರ ಸಂಭ್ರಮದ ನಡುವೆ ಐಪಿಎಲ್ 2024 ಕುರಿತಂತೆ ಹೊಸ ಅಪ್ಡೇಟ್ಗಳು ಹೊರಬಿದ್ದಿವೆ. ಸೆಪ್ಟೆಂಬರ್‌ನಲ್ಲಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೌದಿ ಪ್ರತಿನಿಧಿಗಳು ಮತ್ತು ಭಾರತೀಯ ಅಧಿಕಾರಿಗಳ ನಡುವೆ ಈ ಮಾತುಕತೆ ನಡೆದಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).