

ಮೆಲ್ಬೋರ್ನ್: ಟಿ-20 ವಿಶ್ವಕಪ್ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುತ್ತಿದ್ದೆ. ಕ್ರಿಕೆಟ್ ಪ್ರೇಮಿಗಳು ಈಗಾಗಲೇ ಪಂದ್ಯದ ಆರಂಭಕ್ಕೆ ಕಾದು ಕುಳಿತಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಭಾರತ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಕುತೂಹಲ ಹೆಚ್ಚಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯ ಗೆಲ್ಲಲು ಆಟಗಾರರು ಈಗಾಗಲೇ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದೀಗ ಟೀಂ ಮ್ಯಾನೇಜ್ಮೆಂಟ್ಗೆ ಆಡುವ ಹನ್ನೊಂದರ ಬಳಗದಲ್ಲಿ ಯಾರಿಗೆ ಅವಕಾಶ ನೀಡಬೇಕು ಎಂಬುವುದೇ ಚಿಂತೆಯಾಗಿದೆ. ಹೌದು, ಭಾರತ ತಂಡ ಬಲಿಷ್ಠ ಹಾಗೂ ಟಿ-20 ಸ್ಪೆಷಲಿಸ್ಟ್ ಆಟಗಾರರನ್ನೇ ಹೊಂದಿದೆ. ಹೀಗಾಗಿ ಪಾಕಿಸ್ತಾನ ವಿರುದ್ಧ ಪಂದ್ಯ ಗೆಲ್ಲಲು ತಂಡದ ಸಮತೋಲನ ಮುಖ್ಯವಾಗುತ್ತದೆ.
ಇದೀಗ ಭಾರತ ತಂಡಲ್ಲಿ ಇಬ್ಬರು ವಿಕೆಟ್ ಕೀಪರ್ಗಳಿದ್ದಾರೆ. ಹಿರಿಯ ಹಾಗೂ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಹಾಗೂ ರಿಷಬ್ ಪಂತ್ ನಡುವೆ ಪೈಪೋಟಿ ಏರ್ಪಟ್ಟಿದೆ. ದಿನೇಶ್ ಅದ್ಭುತ್ ಪಾರ್ಮ್ ಹೊಂದಿದ್ದು, ಜೊತೆಗೆ ಮ್ಯಾಚ್ ವಿನ್ನರ್ ಆಗಿಯೂ ಸಕ್ಸಸ್ ಆಗಿದ್ದಾರೆ. ಹೀಗಾಗಿ ಮಿಡಲ್ ಆರ್ಡರ್ ಹಾಗೂ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ದಿನೇಶ್ ಕಾರ್ತಿಕ್ ಹೆಗಲಿಗೆ ಹಾಕುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಎಡಗೈ ಆಟಗಾರನಾಗಿ ಪಂತ್ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ.
ಜಸ್ಪ್ರೀತ್ ಬುಮ್ರಾ ಗಾಯದಿಂದ ಹೊರನಡೆದ ಕಾರಣ, ಕೊನೆಯ ಹಂತದಲ್ಲಿ ತಂಡಕ್ಕೆ ಸೇರ್ಪಡೆಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳಬಹುದು. ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿ, ಕೊನೆಯ ಓವರ್ನಲ್ಲಿ 4 ವಿಕೆಟ್ ಕಬಳಿಸುವ ಮೂಲಕ ತಂಡ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಮೊಹಮ್ಮದ ಶಮಿ ಜತೆಗೆ, ಎಡಗೈ ವೇಗೆ ಆರ್ಷ್ದೀಪ್ ಸಿಂಗ್ ಸ್ಥಾನ ಪಡೆದುಕೊಳ್ಳುವುದು ಖಚಿತ. ಸದ್ಯ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಹರ್ಷಲ್ ಪಟೇಲ್ ನಡುವೆ ಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ತವರಿನಲ್ಲಿ ನಡೆದ ಪಂದ್ಯದಲ್ಲಿ ದುಬಾರಿಯಾದ ಭುವನೇಶ್ವರ್ ಹಲವರ ಟೀಕೆಗೆ ಗುರಿಯಾಗಿದ್ದಾರು. ಒಂದು ವೇಳೆ ಟೀಂ ಮ್ಯಾನೇಜ್ಮೆಂಟ್ ಡೆತ್ ಓವರ್ ಸ್ಪೆಷಲಿಸ್ಟ್ ಎಂದು ಕರೆಯಿಸಿಕೊಳ್ಳುವ ಹರ್ಷಲ್ ಪಟೇಲ್ಗೆ ಮಣೆ ಹಾಕಿದರೂ ಅಚ್ಚರಿಯೇನಿಲ್ಲ.