

ನವದೆಹಲಿ: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಗುಜರಾತಿನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಪಾಕ್ ದಿಗ್ಗಜ, ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಂದ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಟ್ರೋಲ್ ಆಗಿದ್ದಾರೆ.
ತಾವು ಪಾಕ್ ಪರ ಆಡುತ್ತಿದ್ದಾಗ ವಿಕೆಟ್ ಪಡೆದು ಸಂಭ್ರಮಿದ ಫೋಟೋವೊಂದನ್ನು ಅಖ್ತರ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ನಾಳೆ ಇತಿಹಾಸ ಮರುಕಳಿಸುತ್ತದೆ ಎಂದು ಅಡಿಬರಹ ನೀಡಿದ್ದರು. ಇದು ಭಾರತೀಯರ ಕಣ್ಣಿಗೆ ಬೀಳುತ್ತಿದ್ದಂತೆ ಇಂಡೋ-ಪಾಕ್ ನಡುವಿನ ಕ್ರಿಕೆಟ್ ಇತಿಹಾಸ, ಅದರಲ್ಲೂ ವಿಶ್ವಕಪ್ ಟೂರ್ನಿಯಲ್ಲಿ ಉಭಯ ದೇಶಗಳ ಸಾಧನೆಯನ್ನು ನೆನಪು ಮಾಡಿ ಅಖ್ತರ್ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಇದಾದ ಬಳಿಕ ಅಖ್ತರ್, ಟೆಸ್ಟ್ ಪಂದ್ಯದ ವೇಳೆ ಸಚಿನ್ ತೆಂಡೂಲ್ಕರ್ ಅವರನ್ನು ಔಟ್ ಮಾಡಿದ ಫೋಟೋವನ್ನು ಪೋಸ್ಟ್ ಮಾಡಿದರು. ಆದರೆ ಟ್ರೋಲ್ ಮುಂದುವರಿದಂತೆ ಮುಜಗರಕ್ಕೀಡಾದ ಅಖ್ತರ್ ಜಾಲತಾಣದಿಂದ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ಇತಿಹಾಸ ಏನು?
ಕ್ರಿಕೆಟ್ ಹುಟ್ಟುವಿನಿಂದ ಹಿಡಿದು ಇಂದಿನವರೆಗೂ ಇಂಡೋ-ಪಾಕ್ ಕದನ ರೋಚಕತೆ ಕಾಯ್ದುಕೊಂಡಿದೆ. ಅದರಲ್ಲೂ ವಿಶ್ವಕಪ್ ಕದನಗಳ ಬಗ್ಗೆಯಂತೂ ಹೇಳತೀರದು, ಐಸಿಸಿ ಟಿ20 ಮತ್ತು ಏಕದಿನ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಒಟ್ಟು 14 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಗಮನಾರ್ಹ ಸಂಗತಿ ಏನೆಂದರೆ, ಏಕದಿನ ವಿಶ್ವಕಪ್ನಲ್ಲಿ ಏಳು ಬಾರಿಯೂ ಭಾರತವೇ ವಿಜಯೋತ್ಸವ ಆಚರಿಸಿದೆ. ಟಿ20 ವಿಶ್ವಕಪ್ನಲ್ಲಿಯೂ 7 ಬಾರಿ ಉಭಯ ತಂಡಗಳು ಸೆಣಸಾಡಿದ್ದು, ಪಾಕಿಸ್ತಾನ 2021ರಲ್ಲಿ ಒಂದು ಬಾರಿ ಮಾತ್ರ ಗೆಲುವು ದಾಖಲಿಸಿದೆ. ಎರಡು ಮಾದರಿಯಲ್ಲೂ ಭಾರತವೇ ಪಾರುಪತ್ಯ ಸಾಧಿಸಿದೆ. ಆದರೆ, ಅಖ್ತರ್ ಇತಿಹಾರ ಮರುಕಳಿಸುತ್ತದೆ ಎಂದು ಪೋಸ್ಟ್ ಮಾಡಿರುವು ಹಾಸ್ಯಾಸ್ಪದದಂತೆ ತೋರುತ್ತದೆ.
ಇಂದು ಮಧ್ಯಾಹ್ನ ದಾಯಾದಿಗಳ ಕ್ರಿಕೆಟ್ ಕದನ ನಡೆಯಲಿದೆ. ವಿಶ್ವಕಪ್ಗೂ ಮುನ್ನ ನಡೆದ ಏಷ್ಯಾ ಕಪ್ನಲ್ಲಿ ಇಂಡೋ-ಪಾಕ್ ಎರಡು ಬಾರಿ ಮುಖಾಮುಖಿಯಾದವು. ಇದರಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಇನ್ನೊಂದು ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ಅಮೋಘ ಜಯ ದಾಖಲಿಸಿತು. ಇನ್ನು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿವೆ ಉಭಯ ತಂಡಗಳಿಗೆ ಇಂದು ನಡೆಯಲಿರುವ ಪಂದ್ಯ ಮೂರನೇ ಪಂದ್ಯವಾಗಿದ್ದು, ಹ್ಯಾಟ್ರಿಕ್ ಗೆಲುವು ಯಾರಿಗೆ ಲಭಿಸಲಿದೆ ಎಂದು ನೋಡಬೇಕಿದೆ.
ಟೀಮ್ ಇಂಡಿಯಾ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮ, ಜಸ್ಪ್ರೀತ್ ಬೂಮ್ರಾ, ಕೆ ಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಅವರ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಶುಭಮನ್ ಗಿಲ್ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದು, ತಂಡಕ್ಕೆ
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ. (ಏಜೆನ್ಸೀಸ್)