

Shubman Gill: ಮ್ಯಾಚೆಂಸ್ಟರ್ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ನ ಐದನೇ ದಿನದಾಟದಲ್ಲಿ ಟೀಮ್ ಇಂಡಿಯಾ ಪರ ನಾಯಕ ಶುಭಮನ್ ಗಿಲ್ ಮಿಂಚಿದ್ದಾರೆ. ಕೇವಲ ಕ್ಯಾಪ್ಟನ್ ಆಟ ಪ್ರದರ್ಶಿಸದ ಗಿಲ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ 700ಕ್ಕೂ ಅಧಿಕ ರನ್ ಗಳಿಸಿದ ಮೊದಲ ಏಷ್ಯನ್ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಶುಭಮನ್ ಇತಿಹಾಸ ನಿರ್ಮಿಸಿದ್ದಾರೆ. ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ 101* ರನ್ ಗಳಿಸಿದ ಬೆನ್ನಲ್ಲೇ ಗಿಲ್ ಈ ಮೈಲಿಗಲ್ಲು ತಲುಪಿದ್ದಾರೆ. ಇಷ್ಟೇ ಅಲ್ಲದೇ, ಟೆಸ್ಟ್ ಸರಣಿಯಲ್ಲಿ 700ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.
ಶುಭಮನ್ ಗಿಲ್ (ಭಾರತ) - 701* ರನ್
ಮೊಹಮ್ಮದ್ ಯೂಸುಫ್ (ಪಾಕಿಸ್ತಾನ) - 631 ರನ್
ರಾಹುಲ್ ದ್ರಾವಿಡ್ (ಭಾರತ) - 602 ರನ್
ವಿರಾಟ್ ಕೊಹ್ಲಿ (ಭಾರತ) - 593 ರನ್
ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಗಳಿಸಿದ ಅತಿ ಹೆಚ್ಚು ರನ್ಗಳ ದಾಖಲೆಯು ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರ ಹೆಸರಿನಲ್ಲಿದೆ. ಅವರ ನಂತರದ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಇದ್ದರೆ, ಶುಭಮನ್ ಗಿಲ್ ಮೂರನೇ ಸ್ಥಾನದಲ್ಲಿದ್ದಾರೆ.