

Shubman Gill: ಎಡ್ಜ್ಬಾಸ್ಟನ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಬಾರಿಸಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್, ಇದೀಗ ದ್ವಿಶಕ ಬಾರಿಸುವ ಮೂಲಕ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.
ಟಾಸ್ ಸೋತು ಬ್ಯಾಟ್ ಮಾಡಿದ ಭಾರತ ಇಂದು ಎರಡನೇ ದಿನದಾಟಕ್ಕೆ ಕಾಲಿಟ್ಟಿದೆ. ಮೊದಲ ದಿನದ ಅಂತ್ಯಕ್ಕೆ ಟೀಮ್ ಇಂಡಿಯಾ 5 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿತು. ತಂಡದ ಪರ ಕ್ಯಾಪ್ಟನ್ ಇನ್ನಿಂಗ್ಸ್ ತೋರಿರುವ ಶುಭಮನ್ ಗಿಲ್, ಅಜೇಯ ದ್ವಿಶತಕ (200*) ಬಾರಿಸಿ, ಕೊಹ್ಲಿ ದಾಖಲೆಯನ್ನೂ ಮುರಿದಿದ್ದಾರೆ.
ಈ ಹಿಂದೆ 2018ರಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿ 149 ರನ್ ದಾಖಲಿಸಿದ್ದ ವಿರಾಟ್ ಕೊಹ್ಲಿ, ಭಾರತೀಯ ಆಟಗಾರನಾಗಿ ಇಲ್ಲಿಯವರೆಗೆ ದಾಖಲಿಸಿದ ಅತಿ ಹೆಚ್ಚು ರನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ, ಇಂದಿನ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ದ್ವಿಶತಕ ಬಾರಿಸುವ ಮೂಲಕ ಗಿಲ್, ಕಿಂಗ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
ಪ್ರಸ್ತುತ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಕ್ಯಾಪ್ಟನ್ ಆಗಿ ಮುನ್ನಡೆಸುತ್ತಿರುವ ಗಿಲ್, 311 ಎಸೆತಗಳಲ್ಲಿ 200 ರನ್ ಬಾರಿಸಿದ್ದಾರೆ. ಇದರಲ್ಲಿ 21 ಬೌಂಡರಿ ಮತ್ತು ಎರಡು ಸಿಕ್ಸರ್ಗಳಿವೆ.