VIDEO | ಶತಕದ ಬೆನ್ನಲ್ಲೇ ದ್ವಿಶತಕ ಸಿಡಿಸಿ ಮಿಂಚಿದ ಶುಭಮನ್ ಗಿಲ್

ಶುಭಮನ್ ಗಿಲ್
Published on

ಹೈದರಾಬಾದ್: ಟೀಂ ಇಂಡಿಯಾ ಆರಂಭಿಕ ಶುಭಮನ್ ಗಿಲ್, ತವರಿನಲ್ಲಿ ಶ್ರೀಲಂಕಾ ವಿರುದ್ಧ ಸೆಂಚುರಿಸಿ ಸಿಡಿಸಿದ ಬೆನ್ನಲ್ಲೇ ಇದೀಗ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಬಾರಿಸಿ ಮಿಂಚಿದ್ದಾರೆ. 149 ಎಸೆತಗಳನ್ನು ಎದುರಿಸಿದ ಗಿಲ್, 208 ರನ್ ಗಳಿಸಿ ಮಿಂಚಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾದರು.

ಹೈದರಾಬಾದ್​ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರಿನ ಏಕದಿನ ಸರಣಿಯ ಮೊದಲು ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡರು. ರೋಹಿತ್ ಹಾಗೂ ಶುಭಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ 60 ರನ್​ಗಳ ಜೊತೆಯಾಟವಾಡಿತು.

ರೋಹಿತ್ ಔಟ್ ಆಗುತ್ತಿದ್ದಂತೆ ಶುಭಮನ್ ಗಿಲ್ ಜವಾಬ್ದಾರಿಯುತ ಆಟಕ್ಕೆ ಮುಂದಾದರು. 87 ಎಸೆತಗಳಲ್ಲಿ ಗಿಲ್ ಶತಕ ಸಿಡಿಸಿದರು. ಸೆಂಚುರಿ ಬಾರಿಸುತ್ತಿದ್ದಂತೆ ಶುಭಮನ್ ಗಿಲ್ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಅಂತಿಮವಾಗಿ 194 ರನ್ ಆಗಿದ್ದ ವೇಳೆ ಸಿಕ್ಸರ್ ಸಿಡಿಸುವ ಮೂಲಕ ದ್ವಿಶತಕ ಸಿಡಿಸಿ ಮೆರೆದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net