ಶ್ರೀಲಂಕಾ ಮಡಿಲಿಗೆ ಟ್ರೋಫಿ: 27 ವರ್ಷಗಳಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಸರಣಿ ಸೋಲು!

team
Published on

ಕೊಲಂಬೊ: ಅತಿಥೇಯ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಲ್ಲಿ ಗೆದ್ದು ಬೀಗಿದ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಸಂಪೂರ್ಣ ಎಡವಿದ್ದು ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವನ್ನು 110 ರನ್​ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತ ವಿರುದ್ಧ ಗೆದ್ದು ಸಂಭ್ರಮಿಸಿದೆ.

ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಸರಣಿ ಆರಂಭಕ್ಕೂ ಮುನ್ನ ಗೆಲುವಿನ ಫೇವರೇಟ್ ಎನಿಸಿಕೊಂಡಿದ್ದ ರೋಹಿತ್ ಶರ್ಮಾ ಪಡೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಮುಜುಗರದ ಸೋಲಿಗೆ ಕೊರಳೊಡ್ಡಿದೆ.

ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲನುಭವಿಸಿತು. ಭಾರತದ ಪರ ರೋಹಿತ್‌ ಶರ್ಮಾ (35) ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾವೊಬ್ಬ ಆಟಗಾರನೂ ನೆಲಕಚ್ಚಿ ಆಡಲಿಲ್ಲ.ವಿರಾಟ್‌ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದರು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ, ಭರ್ಜರಿ ಆರಂಭ ಪಡೆಯಿತು. ಪಥುಮ್ ಸಿಸಂಕಾ (45), ಆವಿಷ್ಯ ಫರ್ನಾಂಡೋ (96) ಹಾಗೂ ಕುಶಾಲ್ ಮೆಂಡಿಸ್ (59) ರನ್​ಗಳ ನೆರವಿನಿಂದ 7 ವಿಕೆಟ್​ ಕಳೆದುಕೊಂಡು 248 ರನ್ ಗಳಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net