

ಕೊಲಂಬೊ: ಇಲ್ಲಿನ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ (ಆಗಸ್ಟ್ 04) ನಡೆಯಲಿದೆ. ಶುಕ್ರವಾರ (ಆಗಸ್ಟ್ 02) ಇದೇ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಟೈ ಆಗಿತ್ತು. ಹೀಗಾಗಿ ಉಭಯ ತಂಡಗಳಿಗೂ ಎರಡನೇ ಪಂದ್ಯ ಅತಿಮುಖ್ಯವಾಗಿದ್ದು, ಸರಣಿಯನ್ನು ವಶಪಡಿಸಿಕೊಳ್ಳಬೇಕೆಂದರೆ ಗೆಲ್ಲಲೇಬೇಕಾದ ಒತ್ತಡದಲ್ಲಿವೆ.
ಗೆಲ್ಲುವ ಅವಕಾಶ ಇದ್ದರೂ ಪಂದ್ಯವನ್ನು ಕಳೆದುಕೊಂಡ ಬೇಸರದಲ್ಲಿ ಭಾರತ ತಂಡವಿದ್ದರೆ, ಸೋಲುವ ಪಂದ್ಯವನ್ನು ಟೈ ಮಾಡಿಕೊಂಡ ಆತ್ಮವಿಶ್ವಾಸದಲ್ಲಿ ಶ್ರೀಲಂಕಾ ತಂಡ ಬೀಗುತ್ತಿದೆ. ಹೀಗಾಗಿ ಉಭಯ ತಂಡಗಳಿಗೂ ಎರಡನೇ ಪಂದ್ಯ ಮುಖ್ಯವಾಗಿದ್ದು, ತೀವ್ರ ರೋಚಕತೆ ಸೃಷ್ಟಿಸಿದೆ. ಆದರೆ, ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಪ್ಲಸ್ ಆಗಲಿದೆ ಎಂಬುದನ್ನು ನೋಡಬೇಕಿದೆ.
ಮೊದಲ ಏಕದಿನ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿತ್ತಾದರೂ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿರಲಿಲ್ಲ. ಆದರೆ ಭಾನುವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಹೇಳಿತ್ತಾದರೂ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿರಲಿಲ್ಲ. ಆದರೆ ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆಯಾದರೂ ಮಳೆ ಬಾರದಿರಲಿ ಎಂಬ ನಿರೀಕ್ಷೆಯಲ್ಲಿ ಉಭಯ ತಂಡಗಳು ಹಾಗೂ ಅಭಿಮಾನಿಗಳು ಇದ್ದಾರೆ. ಒಂದು ವೇಳೆ ಮಳೆ ಪಂದ್ಯಕ್ಕೆ ಅಡ್ಡಿಪಡಿಸಿದರೆ ಉಭಯ ತಂಡಗಳಿಗೂ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೇಳಲಾಗಿದೆ. ಎರಡನೇ ಪಂದ್ಯದಲ್ಲೂ ವೇಗಿಗಳಿಗಿಂತ ಸ್ಪಿನ್ನರ್ಗಳೆ ಮೇಲುಗೈ ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಪಿಚ್ ವಿಚಾರಕ್ಕೆ ಬರುವುದಾದರೆ ರನ್ ಗಳಿಸುವುದು ಕಷ್ಟ ಎಂದು ಹೇಳಲಾಗಿದ್ದು, ಮೊದಲ ಇನ್ನಿಂಗ್ಸ್ಗೆ ಹೋಲಿಸಿದರೆ ದ್ವಿತಿಯಾರ್ದದಲ್ಲಿ ರನ್ ಗಳಿಸುವುದು ಕಷ್ಟವಾಗುತ್ತದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮಧ್ಯಾಹ್ನ 73% ಮತ್ತು ಸಂಜೆ 70% ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಪಂದ್ಯದುದ್ದಕ್ಕೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಮಳೆ ಬರುವುದು ಬಹುತೇಕ ಡೌಟ್ ಎಂದು ಹೇಳಲಾಗಿದೆ. ಮಳೆ ಬಾರದೆ ಇರಲಿ ಎಂದು ಅಭಿಮಾನಿಗಳು ಆಶಿಸಿದ್ದಾರೆ.