ಸಹೋದರನಿಗೆ ಕರೊನಾ- ಸೌರವ್‌ ಗಂಗೂಲಿ ಹೋಮ್‌ ಕ್ವಾರಂಟೈನ್‌

sourav gangooli
Published on

ಕೊಲ್ಕತಾ: ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಸ್ನೇಹಶೀಶ್‌ ಗಂಗೂಲಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಅವರ ಸಹೋದರ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಮುಂಜಾಗರೂಕತಾ ಕ್ರಮವಾಗಿ ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ.

ಸ್ನೇಹಶೀಶ್‌ ಅವರು ಸೌರವ್‌ ಅವರ ಅಣ್ಣ. ಮಾಜಿ ಕ್ರಿಕೆಟ್ ಆಟಗಾರರಾಗಿರುವ ಸ್ನೇಹಶೀಶ್‌ ಅವರನ್ನು ಬೆಲ್ಲೆವ್ಯೂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಇವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಗಂಟಲು ದ್ರವದ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಆರೋಗ್ಯ ಇಲಾಖೆಯ ನಿಯಮದ ಪ್ರಕಾರ ಸೋಂಕು ದೃಢಪಟ್ಟವರ ಸಂಪರ್ಕಕ್ಕೆ ಬಂದಿರುವವರು ಹೋಮ್‌ ಕ್ವಾರಂಟೈನ್‌ನಲ್ಲಿ ಇರಬೇಕು. ಇದರ ಅನ್ವಯ ಸೌರವ್‌ ಗಂಗೂಲಿ ಅವರು ಕ್ವಾರಂಟೈನ್ ನಲ್ಲಿರುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ ಮಾಧ್ಯಮದೊಂದಿಗೆ ಮಾತನಾಡಿದ್ದ ಸೌರವ್, ನನ್ನ ಸಹೋದರ ಪ್ರತಿ ದಿನ ತನ್ನ ಫಾಕ್ಟರಿಗೆ ಭೇಟಿ ನೀಡುತ್ತಾನೆ. ಇದರಿಂದ ಆತನಿಗೆ ಕೋವಿಡ್ ಅಪಾಯ ಹೆಚ್ಚು ಎಂದಿದ್ದರು. (ಏಜೆನ್ಸೀಸ್‌)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net