17 ವರ್ಷದ ಕರಾಬೊ ಮೆಸೊ ಮಹಿಳಾ ವಿಶ್ವಕಪ್‌ಗೆ ಆಯ್ಕೆ! Karabo Meso

Teenager Karabo Meso
Published on

Karabo Meso: ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ 17 ವರ್ಷದ ಬಾಲಕಿಗೆ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಕ್ಕಿದೆ. ಈ ತಿಂಗಳ ಕೊನೆಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್‌ಗಾಗಿ ದಕ್ಷಿಣ ಆಫ್ರಿಕಾ ತನ್ನ 15 ಸದಸ್ಯರ ತಂಡದಲ್ಲಿ 17 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ಕರಾಬೊ ಮೆಸೊ ಅವರನ್ನು ಹೆಸರಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಮೆಸೊ, ಇದುವರೆಗೆ ಎರಡು ಏಕದಿನ ಮತ್ತು ಐದು ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. ಈಗ 2025 ರ ಮಹಿಳಾ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ಪ್ರಾರಂಭವಾಗಲಿದ್ದು, ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಬುಧವಾರ ಪಂದ್ಯಾವಳಿಗೆ ತನ್ನ ತಂಡವನ್ನು ಪ್ರಕಟಿಸಿದೆ. 17 ವರ್ಷದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕರಾಬೊ ಮೆಸೊ ಅವರನ್ನು ತಂಡದಲ್ಲಿ ಹೆಸರಿಸಲಾಗಿದೆ.

ವಿಶ್ವಕಪ್ ಸೆಪ್ಟೆಂಬರ್ 30 ರಂದು ಪ್ರಾರಂಭವಾಗಿ ನವೆಂಬರ್ 2 ರಂದು ಅಂತಿಮ ಪಂದ್ಯದೊಂದಿಗೆ ಕೊನೆಗೊಳ್ಳುತ್ತದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಗುವಾಹಟಿಯಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

17 ವರ್ಷದ ಕರಾಬೊ ಮೇಸೊ ಅವರಿಗೆ ವಿಶ್ವಕಪ್‌ನಂತಹ ದೊಡ್ಡ ಟೂರ್ನಿಯಲ್ಲಿ ಅವಕಾಶ ನೀಡುವುದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಅವರ ಮೇಲೆ ಹೊಂದಿರುವ ವಿಶ್ವಾಸವನ್ನು ತೋರಿಸುತ್ತದೆ.

ದಕ್ಷಿಣ ಆಫ್ರಿಕಾ ತಂಡದ 15 ಸದಸ್ಯರು:

ಲಾರಾ ವೊಲ್ವಾರ್ಡ್ಟ್ (ಸಿ), ಅಯಾಬೊಂಗಾ ಖಾಕಾ, ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಮರಿಝನ್ನೆ ಕಪ್, ತಜ್ಮಿನ್ ಬ್ರಿಟ್ಸ್, ಸಿನಾಲೊ ಜಾಫ್ತಾ, ನಾನ್ಕುಲುಲೆಕೊ ಮ್ಲಾಬಾ, ಆನ್ನೆರಿ ಡೆರ್ಕ್ಸೆನ್, ಅನ್ನೆಕೆ ಬಾಷ್, ಮಸಾಬಟಾ ಕ್ಲಾಸ್, ಸುನೆ ಲೂಸ್ , ಕರಾಬೊ ಮೆಸೊ, ನಂದುಮಿಸೊ ಶಾಂಗಸೆ, ಮತ್ತು ಕ್ಲೋಯ್ ಟ್ರಯಾನ್, ಕರಾಬೊ ಮೆಸೊ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net