ದಕ್ಷಿಣ ಭಾರತ ಹಿರಿಯರ ಕುಸ್ತಿ ಫ್ರೀ ಸ್ಟೈಲ್ ನ್ಯಾಷನಲ್ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯಕ್ಕೆ 8 ಚಿನ್ನ

New-Project-5
Published on

ಬೆಂಗಳೂರು: ತಮಿಳುನಾಡಿನ ಈರೋಡ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಹಿರಿಯರ ಕುಸ್ತಿ ಪ್ರೀಸ್ಟೈಲ್ ಪುರುಷರ ವಿಭಾಗದ ನ್ಯಾಷನಲ್ ಚಾಂಪಿಯನ್‌ಷಿಪ್ ಸ್ಪರ್ಧೆಯ ಪುರುಷರ ವಿಭಾಗದ ನ್ಯಾಷನಲ್ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯದ ಕುಸ್ತಿಪಟುಗಳು ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಟೂರ್ನಿಯಲ್ಲಿ ರಾಜ್ಯ 8 ಚಿನ್ನ, 2 ಬೆಳ್ಳಿ ಸೇರಿ 10 ಪದಕ ಜಯಿಸಿದೆ.

ಈ ವಿಜೇತರಿಗೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಪ್ರಶಸ್ತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಭಾರತ ಕುಸ್ತಿ ಸಂಘದ ಕಾರ್ಯದರ್ಶಿ ವಿ.ಎನ್ ಪ್ರಸೂದ್, ಜಂಟಿ ಕಾರ್ಯದರ್ಶಿ ಲೋಗನಾದನ್, ಕರ್ನಾಟಕ ಕುಸ್ತಿ ಸಂಘದ ಕಾರ್ಯದರ್ಶಿ ಜೆ.ಶ್ರೀನಿವಾಸ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಕೆ.ಕುಮಾರ್ ಹಾಗೂ ತಾಂತ್ರಿಕ ಸಮಿತಿಯ ಮುಖ್ಯಸ್ಥ ವಿನೋದ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net