ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕ್ರೀಡೆ ಪೂರಕ

dist level dasara sports
ಶಿವಮೊಗ್ಗದಲ್ಲಿ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು. ಡಿ.ಎಸ್.ಅರುಣ್, ರೇಖ್ಯಾನಾಯ್ಕಾ ಇತರರಿದ್ದರು.
Published on

ಶಿವಮೊಗ್ಗ: ಕ್ರೀಡೆಯು ಮನುಷ್ಯನ ವ್ಯಕ್ತಿತ್ವ ಬದಲಾವಣೆ ಮಾಡುವ ಜತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದಸರಾ ಕ್ರೀಡಾಕೂಟವನ್ನು ಪ್ರತಿ ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಪ್ರಯತ್ನ ಈ ಕ್ರೀಡಾಕೂಟದಲ್ಲಿ ನಡೆಯುತ್ತದೆ. ಪ್ರತಿಯೊಬ್ಬರಿಗೂ ಸಾಮರ್ಥ್ಯ ಇರುತ್ತದೆ. ಪ್ರತಿಭೆ ಅನಾವರಣ ಮಾಡಲು ಇದೊಂದು ಉತ್ತಮ ಅವಕಾಶ ಎಂದರು.
ಎಂಎಲ್‌ಸಿ ಡಿ.ಎಸ್.ಅರುಣ್ ಮಾತನಾಡಿ, ವಿವಿಧ ತಾಲೂಕು ಕೇಂದ್ರಗಳಲ್ಲಿ 14 ಕ್ರೀಡೆಗಳಲ್ಲಿ ಜಯಗಳಿಸಿ, ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಗಮಿಸಿದ ಎಲ್ಲ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಮುಂದಿನ ದಿನಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಲು ಶ್ರಮಿಸಿ ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕಾ, ವಿವಿಧ ಕ್ರೀಡಾ ಸಂಘ ಸಂಸ್ಥೆಗಳು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಪ್ರತಿಯೊಬ್ಬರಿಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯ. ಅದು ಕ್ರೀಡೆಯಿಂದ ಸುಲಭವಾಗಿ ದೊರೆಯುತ್ತದೆ. ಕ್ರೀಡೆಯಲ್ಲಿ ಸವಾಲುಗಳನ್ನು ಎದುರಿಸಿದರೆ ಜೀವನದಲ್ಲಿಯೂ ಎಂಥದ್ದೇ ಕಷ್ಟಗಳು ಬಂದರೂ ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ. ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಬೇಕು. ಇಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು.- ಡಾ. ಧನಂಜಯ ಸರ್ಜಿ, ವಿಧಾನಪರಿಷತ್ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net