

ದುಬೈ: ವೃದ್ಧಿಮಾನ್ ಸಾಹ (87ರನ್, 45 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ಡೇವಿಡ್ ವಾರ್ನರ್ (66ರನ್, 34 ಎಸೆತ, 8 ಬೌಂಡರಿ, 2 ಸಿಕ್ಸರ್) ಜೋಡಿಯ ಸ್ಫೋಟಕ ಹಾಗೂ ಸ್ಪಿನ್ನರ್ ರಶೀದ್ ಖಾನ್ (7ಕ್ಕೆ 3) ಮಾರಕ ದಾಳಿ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್-13ರಲ್ಲಿ 5ನೇ ಜಯ ದಾಖಲಿಸಿ ಪ್ಲೇ-ಆ್ ಆಸೆಯನ್ನು ಜೀವಂತವಾಗಿರಿಕೊಂಡಿತು.
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಡೇವಿಡ್ ವಾರ್ನರ್ ಬಳಗ 88 ರನ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು. ಇದರೊಂದಿಗೆ ಶ್ರೇಯಸ್ ಅಯ್ಯರ್ ಬಳಗ ಹ್ಯಾಟ್ರಿಕ್ ಸೋಲಿಗೆ ಶರಣಾಯಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ತಂಡ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್ ಜತೆಗೆ ಸ್ಲಾಗ್ ಓವರ್‌ಗಳಲ್ಲಿ ಮನೀಷ್ ಪಾಂಡೆ (44*ರನ್, 31 ಎಸೆತ, 4 ಬೌಂಡರಿ, 1 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಲವಾಗಿ 2 ವಿಕೆಟ್‌ಗೆ 219 ರನ್ ಪೇರಿಸಿತು. ಪ್ರತಿಯಾಗಿ ಡೆಲ್ಲಿ ತಂಡ 19 ಓವರ್‌ಗಳಲ್ಲಿ 131 ರನ್‌ಗಳಿಗೆ ಸರ್ವಪತನ ಕಂಡಿತು.