

ಶ್ರೀಲಂಕಾ: ಇಂದು ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳೆಯರ ಏಷ್ಯಾ ಕಪ್ ಟಿ20 ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಿ ಸೆಣಸಾಡಿತು. ಕಡೆಗೂ ಟೀಮ್ ಇಂಡಿಯಾವನ್ನು 8 ವಿಕೆಟ್ಗಳ ಅಂತರದಿಂದ ಮಣಿಸಿದ ಶ್ರೀಲಂಕಾ, ತಮ್ಮ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದೆ.
ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ ಶ್ರೀಲಂಕಾಗೆ ಬೌಲಿಂಗ್ ಮಾಡುವಂತೆ ತಿಳಿಸಿತು. 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಕಲೆಹಾಕುವಲ್ಲಿ ಭಾರತ ಶಕ್ತವಾಯಿತು. ಈ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ಪರ ಚಾಮರಿ ಅಥಾಪತ್ತು (61) ಮತ್ತು ಹರ್ಷಿತಾ ಸಮರವಿಕ್ರಮ (69*) ಆಕರ್ಷಕ ಜತೆಯಾಟ ಟ್ರೋಫಿ ಎತ್ತಿ ಹಿಡಿಯಲು ಪ್ರಮುಖ ಕಾರಣವಾಯಿತು.