

ನವದೆಹಲಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ಇದು 'ಹೃದಯವಿದ್ರಾವಕ ಘಟನೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನಲ್ಲಿ ನಡೆದ ದುರಂತ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
(ಏಜೆನ್ಸೀಸ್)
ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ