

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಲ್ಲಿ ವಾಲಿಬಾಲ್ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನ ಜಾಲಹಳ್ಳಿ ಪಶ್ಚಿಮದ ಚಿಕ್ಕಸಂದ್ರದಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ ಆಶ್ರಯದಲ್ಲಿ 2026-27ನೇ ಸಾಲಿನ ರಾಜ್ಯಮಟ್ಟದ ಅಂತರ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಚಾಂಪಿಯನ್ಷಿಪ್ ಆಯೋಜಿಸಲಾಗಿದೆ.
ನವೆಂಬರ್ 27 ಮತ್ತು 28ರಂದು ಎರಡು ದಿನಗಳ ಕಾಲ ಶಾಲೆಯ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದೆ. ರಾಜ್ಯದ ವಿವಿಧ ಶಾಲೆಗಳ ತಂಡಗಳು ಈ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪಂದ್ಯಾವಳಿಯಲ್ಲಿ ಅಗ್ರ ಮೂರು ಸ್ಥಾನ ಪಡೆಯುವ ತಂಡಗಳ ಅತ್ಯುತ್ತಮ ಆಟಗಾರರನ್ನು ಮುಂಬರುವ ಮುಕ್ತ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್ಷಿಪ್-2026ಕ್ಕೆ ಆಯ್ಕೆ ಮಾಡಲಾಗುವುದು ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದರಿಂದ ಪ್ರತಿಭಾವಂತ ಶಾಲಾ ಆಟಗಾರರಿಗೆ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ಅವಕಾಶ ಲಭಿಸಲಿದೆ.
ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ನ ಲಾಂಛನ ಹಾಗೂ ಎಸ್.ಎಂ.ವಿ.ಎಲ್. ಸಂಸ್ಥೆಯ ಲಾಂಛನ ಹೊಂದಿರುವ ಪಂದ್ಯಾವಳಿ ಇದಾಗಿದೆ.