

ipl:2025| ಮೇ 25, 2025 ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿ ಸೆಣೆಸಾಟ ನಡೆಸಿದವು.
ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 18.4 ಓವರ್‌ಗಳಲ್ಲಿ 168 ರನ್‌ಗಳಿಗೆ ಸೀಮಿತಗೊಳಿಸಿ, 110 ರನ್‌ಗಳಿಂದ ಗೆಲುವು ಸಾಧಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ತಂಡವು 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತು. ಸನ್‌ರೈಸರ್ಸ್ ಹೈದರಾಬಾದ್ ತಂಡವು 278 ರನ್‌ಗಳನ್ನು ಗಳಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೂರನೇ ಅತ್ಯಧಿಕ ಮೊತ್ತವನ್ನು ಗಳಿಸಿತು. ಹೆನ್ರಿಕ್ ಕ್ಲಾಸೆನ್ ತಮ್ಮ ಎರಡನೇ ಐಪಿಎಲ್ ಶತಕವನ್ನು ಗಳಿಸಿದರೆ, ಟ್ರಾವಿಸ್ ಹೆಡ್ 76 ರನ್‌ಗಳನ್ನು ಗಳಿಸಿ ತ್ವರಿತಗತಿಯಲ್ಲಿ ಆಟವಾಡಿದರು.