

ಬೆಂಗಳೂರು: ಏಕದಿನ ವಿಶ್ವ ಚಾಂಪಿಯನ್ ಆಸ್ಟ್ರೆಲಿಯಾ ವಿರುದ್ಧ ಗುರುವಾರ ಆರಂಭವಾಗಲಿರುವ 5 ಪಂದ್ಯಗಳ ಟಿ20 ಸರಣಿಗೆ ಆತಿಥೇಯ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿಶ್ವಕಪ್ನಲ್ಲಿ ಆಡಿದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಬ್ಯಾಟರ್ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದು, ಋತುರಾಜ್ ಗಾಯಕ್ವಾಡ್ ಮೊದಲ 3 ಪಂದ್ಯಗಳಿಗೆ ಉಪನಾಯಕನಾಗಿ ನೇಮಕಗೊಂಡಿದ್ದಾರೆ. ಕೊನೇ 2 ಪಂದ್ಯಗಳಿಗೆ ಉಪನಾಯಕರಾಗಿ ಶ್ರೇಯಸ್ ಅಯ್ಯರ್ ತಂಡ ಸೇರಲಿದ್ದಾರೆ. ಡಿಸೆಂಬರ್ 3ರಂದು ಹೈದರಾಬಾದ್ನಲ್ಲಿ ನಿಗದಿಯಾಗಿದ್ದ 5ನೇ ಹಾಗೂ ಅಂತಿಮ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದಿದ್ದ ತಂಡದ ಬಹುತೇಕ ಆಟಗಾರರು ಸ್ಥಾನ ಪಡೆದಿದ್ದು, ವಿಶ್ವಕಪ್ಗೆ ಮುನ್ನ ಗಾಯಗೊಂಡಿದ್ದ ಆಲ್ರೌಂಡರ್ ಅಕ್ಷರ್ ಪಟೇಲ್ ಕಂಬ್ಯಾಕ್ ಮಾಡಿದ್ದಾರೆ. ಸಂಜು ಸ್ಯಾಮ್ಸನ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ತಂಡ: ಸೂರ್ಯಕುಮಾರ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್(ವಿ.ಕೀ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಜಿತೇಶ್ ಶರ್ಮ (ವಿ.ಕೀ), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್, ಮುಕೇಶ್ ಕುಮಾರ್.