

ನವದೆಹಲಿ: ನವೆಂಬರ್ 23 ರಿಂದ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ-20 ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ತಂಡವನ್ನು ಪ್ರಕಟಿಸಿದೆ.
ಪುರುಷರ ಆಯ್ಕೆ ಸಮಿತಿಯು ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಆದ ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ತಂಡದ ನಾಯಕರನ್ನಾಗಿ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ. ಶ್ರೇಯಸ್ ಅಯ್ಯರ್ ಸರಣಿಯ ಕೊನೆಯ ಎರಡು ಪಂದ್ಯಗಳನ್ನು ಆಡಲಿದ್ದು, ಗಾಯಕ್ವಾಡ್ ಬದಲಿಗೆ ಉಪನಾಯಕರಾಗಿ ಆಯ್ಕೆಯಾಗಲಿದ್ದಾರೆ.
2023ರ ಐಸಿಸಿ ವಿಶ್ವಕಪ್ನಲ್ಲಿ ಭಾರತ ತಂಡದ ಪ್ರಮುಖ ಭಾಗವಾಗಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಕೆ.ಎಲ್. ರಾಹುಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ಕೊಟ್ಟು, ಯುವ ತಂಡವನ್ನು ಆಯ್ಕೆ ಮಾಡಲಾಗಿದೆ.
ಪ್ರಕಟಗೊಂಡ ಟೀಮ್ ಇಂಡಿಯಾ ಆಟಗಾರರ ಪಟ್ಟಿ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ವೈಸ್ ಕ್ಯಾಪ್ಟನ್), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್,(ಏಜೆನ್ಸೀಸ್).