ಇಂಡೋ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೂ ಮುನ್ನ ವಿಶೇಷ ಮನವಿ ಮಾಡಿದ ಸೂರ್ಯಕುಮಾರ್​ ಯಾದವ್​!

Suryakumar Yadav
Published on

ನವದೆಹಲಿ: ವಿಶ್ವಕಪ್​ ಟೂರ್ನಿಯ ಹೈವೋಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ 2 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಇಡೀ ದೇಶವೇ ಈ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದು, ಈಗಾಗಲೇ ಟಿಕೆಟ್​ಗಳು ಸೋಲ್ಡೌಟ್​ ಆಗಿವೆ. ಆದರೂ ಇನ್ನಷ್ಟು ಟಿಕೆಟ್​ಗಳಿಗಾಗಿ ಭಾರೀ ಬೇಡಿಕೆಯೂ ಇದೆ. ಇದರ ಬೆನ್ನಲ್ಲೇ ಟೀಮ್​​ ಇಂಡಿಯಾ ಯುವ ಸ್ಫೋಟಕ ಆಟಗಾರ ಸೂರ್ಯಕುಮಾರ್​ ಯಾದವ್​ ಮಾಡಿರುವ ಪೋಸ್ಟ್​ ಜಾಲತಾಣದಲ್ಲಿ ವೈರಲ್​ ಆಗಿದೆ.

ಇನ್​ಸ್ಟಾಗ್ರಾಂ ಸ್ಟೋರಿಯ ಮೂಲಕ ತಮ್ಮ ಪರಿಚಯಸ್ಥರ ಬಳಿ ಮನವಿಯೊಂದನ್ನು ಮಾಡಿಕೊಳ್ಳುವ ಮೂಲಕ ಸೂರ್ಯಕುಮಾರ್​ ನಗೆಚಟಾಕಿ ಹಾರಿಸಿದ್ದಾರೆ. ಸಹೋದರರೇ ಪ್ರತಿಯೊಬ್ಬರ ಮನೆಯಲ್ಲಿ ಒಳ್ಳೆ ಒಳ್ಳೆ ಟಿವಿ ಇದೆ. ಅದರ ಮುಂದೆ ಕುಳಿತು ಪಂದ್ಯವನ್ನು ನೋಡಿ ಆನಂದಿಸಿ. ಟಿಕೆಟ್​ಗಾಗಿ ಹೆಚ್ಚಿನ ವಿನಂತಿಗಳನ್ನು ಮಾಡಬೇಡಿ ಎನ್ನುತ್ತಾ ಮಂಗ ಕಣ್ಣು ಮುಚ್ಚಿಕೊಂಡಿರುವ ಎಮೋಜಿಯೊಂದಿಗೆ ಸೂರ್ಯಕುಮಾರ್​ ಸ್ಟೋರಿ ಪೋಸ್ಟ್​ ಮಾಡಿದ್ದಾರೆ.

Suryakumar Yadav insta

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ ಪ್ರಸಕ್ತ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮತ್ತು ಪಾಕ್​ ನಡುವಿನ ಮೊದಲ ಪಂದ್ಯ ಇದಾಗಿದೆ. ಈಗಾಗಲೇ ಉಭಯ ತಂಡಗಳು ಎರಡೆರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿವೆ. ಎರಡೂ ತಂಡಗಳು ಕೂಡ ತುಂಬಾ ಬಲಿಷ್ಠವಾಗಿದ್ದು, ಇಂದಿನ ಪಂದ್ಯ ರಣರೋಚಕವಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.

ವಿಶ್ವಕಪ್​ ಹಿನ್ನೋಟ ನೋಡಿದಾಗ ಭಾರತವೇ ಪಾರುಪತ್ಯ ಸಾಧಿಸಿದೆ. ಐಸಿಸಿ ಟಿ20 ಮತ್ತು ಏಕದಿನ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಒಟ್ಟು 14 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಗಮನಾರ್ಹ ಸಂಗತಿ ಏನೆಂದರೆ, ಏಕದಿನ ವಿಶ್ವಕಪ್​ನಲ್ಲಿ ಏಳು ಬಾರಿಯೂ ಭಾರತವೇ ವಿಜಯೋತ್ಸವ ಆಚರಿಸಿದೆ. ಟಿ20 ವಿಶ್ವಕಪ್​ನಲ್ಲಿಯೂ 7 ಬಾರಿ ಉಭಯ ತಂಡಗಳು ಸೆಣಸಾಡಿದ್ದು, ಪಾಕಿಸ್ತಾನ 2021ರಲ್ಲಿ ಒಂದು ಬಾರಿ ಮಾತ್ರ ಗೆಲುವು ದಾಖಲಿಸಿದೆ. ಎರಡು ಮಾದರಿಯಲ್ಲೂ ಭಾರತವೇ ಪಾರುಪತ್ಯ ಸಾಧಿಸಿದೆ.

ಟೀಮ್​ ಇಂಡಿಯಾ ಅಭಿಮಾನಿಗಳಿಗೆ ವಿರಾಟ್​ ಕೊಹ್ಲಿ, ನಾಯಕ ರೋಹಿತ್​ ಶರ್ಮ, ಜಸ್ಪ್ರೀತ್​ ಬೂಮ್ರಾ, ಕೆ ಎಲ್​ ರಾಹುಲ್​ ಮತ್ತು ಮೊಹಮ್ಮದ್​ ಸಿರಾಜ್​ ಅವರ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಶುಭಮನ್​ ಗಿಲ್​ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದು, ತಂಡಕ್ಕೆ

ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್​ ಕೀಪರ್​), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net