

ಉಜಿರೆ(ದಕ್ಷಿಣ ಕನ್ನಡ): ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ಕೆ.ಎಲ್.ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕೆ.ಎಲ್.ರಾಹುಲ್ಗೆ ಶಾಲು ಹೊದೆಸಿ, ಗೋವಿನ ಕಂಚಿನ ಪ್ರತಿಮೆ ಹಾಗೂ ಬೆಳ್ಳಿ ನಾಣ್ಯ ನೀಡಿ ಆತ್ಮೀಯವಾಗಿ ಗೌರವಿಸಿದರು. ಇದೇ ವೇಳೆ ರಾಹುಲ್ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಐಪಿಎಲ್ 2023ರ ಸಂದರ್ಭದಲ್ಲಿ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಮೊಣಕಾಲಿಗೆ ಗಾಯವಾಗಿತ್ತು. ಇದಿರಂದಾಗಿ ಅರ್ಧದಿಂದಲೇ ರಾಹುಲ್ ಟೂರ್ನಿಯಿಂದ ಹೊರನಡೆಯಬೇಕಾಗಿ ಬಂತು. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನೂ ತಪ್ಪಿಸಿಕೊಂಡರು. ನಂತರ ಅವರು ಲಂಡನ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಂಡ ರಾಹುಲ್, ಪ್ರಸ್ತುತ ಎನ್‌ಸಿಎಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.