

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 185 ರನ್ಗಳಿಗೆ ಆಲೌಟ್ ಆಗಿದ್ದು, ಆತಿತೇಯರು ಮತ್ತೊಮ್ಮೆ ಪ್ರವಾಸಿ ತಂಡದ ಮೇಲೆ ಹಿಡಿತ ಸಾಧಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ (Team India) ಆರಂಭದಲ್ಲೇ ಆಘಾತ ನೀಡಿದ ಆಸ್ಟ್ರೇಲಿಯಾದ ಬೌಲರ್ಗಳು ಅಲ್ಪಮೊತ್ತಕ್ಕೆ ಕಟ್ಟಿಹಾಕುವ ಮುನ್ಸೂಚನೆಯನ್ನು ನೀಢಿದರು. ರಿಷಭ್ ಪಂತ್ (40 ರನ್, 98 ಎಸೆತ, 3 ಬೌಂಡರಿ, 1 ಸಿಕ್ಸರ್) ಕೆಲಕಾಲ ತಂಡಕ್ಕೆ ಆಸರೆಯಾಗಿದ್ದು ಬಿಟ್ಟರೆ ಉಳಿದ ಆಟಗಾರರು ನಿರೀಕ್ಷಿತ ಪ್ರದರ್ಶವನ್ನು ನೀಡುವಲ್ಲಿ ವಿಫಲರಾದರು.
ಆಸ್ಟ್ರೇಲಿಯಾ ಪರ ಸ್ಕಾಟ್ ಬೋಲ್ಯಾಂಡ್ (20-31-4), ಮಿಚೆಲ್ ಸ್ಟಾರ್ಕ್ (18-5-49-3), ಪ್ಯಾಟ್ ಕಮಿನ್ಸ್ (15.2-4-37-2), ನ್ಯಾಥನ್ ಲ್ಯಾನ್ (6-2-19-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ. ಇನ್ನೂ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾಗೆ ಆರಂಭಿಕ ಆಘಾತ ನೀಡಿರುವ ಭಾರತ ತಂಡ ಉಸ್ಮಾನ್ ಖವಾಜಾರನ್ನು ಔಟ್ ಮಾಡಿದೆ. ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 1 ವಿಕೆಟ್ ನಷ್ಟಕ್ಕೆ 9 ರನ್ಗಳಿಸಿದೆ.