ಬೆಂಗಳೂರಿನಲ್ಲಿ ಭಾರತ​ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ ಆತ್ಮಹತ್ಯೆಗೆ ಶರಣು

davidjhonson
Published on

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್​ ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್​ಮೆಂಟ್​ ಮೇಲಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗ ಜಾನ್ಸನ್​ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ್ದ ಡೇವಿಡ್ ಜಾನ್ಸನ್, ಟೀಂ ಇಂಡಿಯಾ ಪರ ಎರಡು ಟೆಸ್ಟ್ ಪಂದ್ಯಗಳನ್ನಾಡಿ ಮೂರು ವಿಕೆಟ್ ಕಬಳಿಸಿದ್ದರು. ಆ ಕಾಲಘಟ್ಟದಲ್ಲಿ ಟೀಂ ಇಂಡಿಯಾ ಪರ ಅತಿವೇಗದ ಬೌಲಿಂಗ್ ಮಾಡಿದ ದಾಖಲೆ ಡೇವಿಡ್ ಜಾನ್ಸನ್ ಅವರ ಹೆಸರಿನಲ್ಲಿತ್ತು. 1996ರಲ್ಲಿ ಭಾರತ​ ತಂಡದ ಪರ ಟೆಸ್ಟ್​ ಪಂದ್ಯ ಆಡಿದ್ದ ಡೇವಿಡ್ ಜಾನ್ಸನ್. ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರ ಆಡಿದ್ದರು. ಡೇವಿಡ್ ಜಾನ್ಸನ್ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರನ್ನು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net