

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಪ್ರಸ್ತುತ ಟೂರ್ನಿಯಲ್ಲಿ ಭಾರತ ತಂಡವು ತಾನಾಡಿರುವ 8 ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಅಜೇವಾಗಿ ಉಳಿದಿದ್ದು, ಸತತ ಒಂಬತ್ತನೇ ಗೆಲುವು ಸಾಧಿಸಲು ಸಜ್ಜಾಗಿದೆ. ಟೂರ್ನಿಯಿಂದ ಈಗಾಗಲೇ ಹೊರಬಿದ್ದಿರುವ ನೆದರ್ಲೆಂಡ್ಸ್ ತಂಡ, ದಕ್ಷಿಣ ಆಫ್ರಿಕಾ ವಿರುದ್ಧ ನೀಡಿದ ಪ್ರದರ್ಶನವನ್ನೇ ಭಾರತದ ವಿರುದ್ಧ ನೀಡುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿದೆ.
ಇಡೀ ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಾಗಿರುವ ಭಾರತಕ್ಕೆ ಕಠಿಣ ಹೋರಾಟ ನೀಡಲು ನೆದರ್ಲೆಂಡ್ಸ್ ಕಠಿಣ ಪ್ರಯತ್ನ ನಡೆಸಲಿದೆ. ಇಂದಿನ ಪಂದ್ಯದಲ್ಲಿ ವಿರಾಟ್ ಶತಕ ಸಿಡಿಸಿದರೆ ಏಕದಿನದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ನೆದರ್ಲ್ಯಾಂಡ್ಸ್ ತಂಡ: ವೆಸ್ಲಿ ಬರೇಸಿ, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ ಮತ್ತು ವಿ.ಕೀ), ಬಾಸ್ ಡಿ ಲೀಡೆ, ತೇಜಾ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್.